ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪಿಸಿ

mp b.y.raghvendra meet centrol minister
ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು. ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಎಚ್.ಎಸ್.ಮಂಜಪ್ಪ, ಯು.ಎಚ್.ರಾಮಪ್ಪ ಇತರರಿದ್ದರು.
Published on

ಶಿವಮೊಗ್ಗ: ಮೆಕ್ಕೆಜೋಳ ಸಂಶೋಧನಾ ಕೇಂದ್ರವನ್ನು ಶಿವಮೊಗ್ಗದಲ್ಲಿ ಶೀಘ್ರ ಸ್ಥಾಪಿಸುವಂತೆ ಕೇಂದ್ರದ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ನೇತೃತ್ವದ ನಿಯೋಗ ಮನವಿ ಮಾಡಿತು.

ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವರನ್ನು ಭೇಟಿಯಾದ ನಿಯೋಗವು, ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆಯಿಂದ ಮಲೆನಾಡು, ಕರಾವಳಿ ಭಾಗದಲ್ಲೂ ಕೃಷಿ ಸಂಶೋಧನೆ ಮತ್ತು ನಾವೀನ್ಯತೆ ವೃದ್ಧಿಸಲು ಸಹಾಯಕವಾಗಲಿದೆ ಎಂದು ಮನವರಿಕೆ ಮಾಡಿದರು.

ವಿಶೇಷವಾಗಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ವಿಷಯವಾಗಿ ಚರ್ಚಿಸಿ, ರೈತ ಸಮುದಾಯದ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿತು. ಡಿ.6ರಂದು ಸಾಗರದಲ್ಲಿ ನಡೆಯುವ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು.

ಉತ್ತರ ಕನ್ನಡದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಸಹಕಾರಿಗಳಾದ ಎಚ್.ಎಸ್.ಮಂಜಪ್ಪ, ಯು.ಎಚ್.ರಾಮಪ್ಪ, ಅನಿಲ್ ಒಡೆಯರ್, ಮಲ್ಲಿಕಾರ್ಜುನ ಹಕ್ರೆ, ಗೋಪಾಲಕೃಷ್ಣ ವೈದ್ಯ, ಪ್ರಕಾಶ ಹೆಗಡೆ, ಗಿರೀಶ್ ಹೆಗಡೆ, ನರಸಿಂಹ ಹೆಗಡೆ ಮತ್ತಿತರರು ನಿಯೋಗದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net