ಮಜಲಟ್ಟಿಯಲ್ಲಿ ಶೀಘ್ರ ಖಾಸಗಿ ಕೋವಿಡ್ ಆಸ್ಪತ್ರೆ

14CKD3_Web
ಚಿಕ್ಕೋಡಿ ಎಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು. ಎಸಿ ರವೀಂದ್ರ ಕರಲಿಂಗಣ್ಣವರ, ಟಿಎಚ್‌ಒ ಡಾ.ವಿ.ವಿ.ಶಿಂಧೆ, ತಹಸೀಲ್ದಾರ್ ಸುಭಾಷ ಸಂಪಗಾವಿ ಇದ್ದರು.
Published on

ಚಿಕ್ಕೋಡಿ: ತಾಲೂಕಿನ ಮಜಲಟ್ಟಿಯಲ್ಲಿ ಚಿಕ್ಕೋಡಿ ಪಟ್ಟಣದ ಖಾಸಗಿ ವೈದ್ಯರ ಸಹಕಾರದಿಂದ 20 ಹಾಸಿಗೆಗಳ ಕೋವಿಡ್ ಆಸ್ಪತ್ರೆಯನ್ನು 2-3 ದಿನಗಳ ಒಳಗೆ ಆರಂಭಿಸಲಾಗುವುದು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಹಿತಿ ನೀಡಿದ್ದಾರೆ.

ಪಟ್ಟಣದ ಉಪವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಖಾಸಗಿ ವೈದ್ಯರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗುತ್ತಿರುವ ಕೋವಿಡ್-19 ಸೋಂಕಿತರ ಒತ್ತಡ ನಿಯಂತ್ರಣಕ್ಕೆ ಖಾಸಗಿ ವೈದ್ಯರು ಚಿಕಿತ್ಸೆ ನೀಡಲು ಮುಂದೆ ಬರಬೇಕು. ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದರು.

ಬಳಿಕ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ತಾಲೂಕಿನ ಮಜಲಟ್ಟಿಯಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ಕೋವಿಡ್-19 ಆಸ್ಪತ್ರೆ ಆರಂಭಿಸಲು ಸೂಕ್ತ ಸ್ಥಳ ಪರಿಶೀಲಿಸಿದರು. ಎಸಿ ರವೀಂದ್ರ ಕರಲಿಂಗಣ್ಣವರ ಮಾತನಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ಖಾಸಗಿ ವೈದ್ಯರ ಮನವೊಲಿಸಿ ಖಾಸಗಿ ಕೋವಿಡ್-19 ಆಸ್ಪತ್ರೆ ಆರಂಭಿಸಲು ಮುತುವರ್ಜಿ ವಹಿಸಿದ್ದಾರೆ ಎಂದರು. ತಹಸೀಲ್ದಾರ್ ಸುಭಾಷ ಸಂಪಗಾವಿ ಟಿಎಚ್‌ಒ ಡಾ.ವಿ.ವಿ.ಶಿಂಧೆ, ಪೌರಾಯುಕ್ತ ಮಹಾವೀರ, ಪುರಸಭೆ ಮುಖ್ಯಾಧಿಕಾರಿ ಡಾ.ಸುಂದರ ಆರ್., ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಉಳ್ಳಾಗಡ್ಡಿ, ಡಿವೈಎಸ್‌ಪಿ ಮನೋಜ ಪಾಟೀಲ, ಸಂಜಯ ಅರಗೆ, ಖಾಸಗಿ ವೈದ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net