ಹುಬ್ಬಳ್ಳಿ: ಇಲ್ಲಿಯ ಮಜೇಥಿಯಾ ಫೌಂಡೇಷನ್ ವತಿಯಿಂದ 105 ಫಲಾನುಭವಿಗಳಿಗೆ ಉಚಿತ ಕೃತಕ ಕೈ ಕಾಲು ಜೋಡಣಾ ಶಿಬಿರ ನಗರದ ಮೂರುಸಾವಿರ ಮಠದ ಸಭಾಗೃಹದಲ್ಲಿ ಜುಲೈ 28ರಂದು ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಯಮನಪ್ಪ ಕರೇಹನುಮಂತಪ್ಪ, ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞೆ ಡಾ. ಶಿಲ್ಪಾ ಚಟ್ನಿ, ಆಥೋರ್ಪೆಡಿಕ್ ಸರ್ಜನ್ ಡಾ. ಸಂದೀಪ ನೀರಲಗಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮಜೇಥಿಯಾ ಫೌಂಡೇಷನ್ ಚೇರ್ಮನ್ ಜೀತೇಂದ್ರ ಮಜೇಥಿಯಾ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.