ಬಿಜೆಪಿಯತ್ತ ಹೆಚ್ಚಿನ ಜನರ ಒಲವು

FotoJet (4)
Published on

ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಹೇಳಿಕ

ಶಿಡ್ಲಘಟ್ಟ : ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ದಿ, ಜನಪರ ಆಡಳಿತದಿಂದ ಭಾರತವನ್ನು ಜಗತ್ತು ನೋಡುವ ದೃಷ್ಟಿಕೋನವೇ ಬದಲಾಗಿದೆ. ಮೋದಿ ಅವರಂತಹ ಧೀಮಂತ ನಾಯಕನ ನೇತೃತ್ವದಲ್ಲಿ ಬಿಜೆಪಿ ಜನಪರ ಆಡಳಿತದಿಂದ ಭಾರತವನ್ನು ಅಭಿವೃದ್ದಿಯ ಪಥದಲ್ಲಿ ಸಾಗುವಂತೆ ಮಾಡಿದೆ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ತಿಳಿಸಿದರು.
ತಾಲೂಕಿನ ಕೊತ್ತನೂರು ಗ್ರಾಮದಲ್ಲಿ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಮಾತನಾಡಿ, ಜಾತಿ-ಧರ್ಮ ಬಡತನ-ಸಿರಿತನದ ತಾರತಮ್ಯ ಇಲ್ಲದೆ ಎಲ್ಲರನ್ನೂ ಸಮಾನತೆಯಿಂದ ನೋಡುವ ಪಕ್ಷ ಬಿಜೆಪಿ ಮಾತ್ರ ಎಂದರು. ಇಲ್ಲಿ ಸಾಮಾನ್ಯ ಕಾರ್ಯಕರ್ತನು ಕೂಡ ಪಕ್ಷದ ಉನ್ನತ ಸ್ಥಾನವನ್ನು ಅಲಂಕರಿಸಬಲ್ಲ, ಸಂವಿಧಾನ ಬದ್ಧ ಹುದ್ದೆಯಲ್ಲೂ ಕೂರ ಬಲ್ಲ. ಅಷ್ಟರಮಟ್ಟಿಗೆ ಕಾರ್ಯಕರ್ತರ ಮತ್ತು ಜನಪರ ಕಾಳಜಿಯುಳ್ಳ ಪಕ್ಷ ಬಿಜೆಪಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿದರು.
ಪ್ರಧಾನಿ ನರೇಂದ್ರಮೋದಿ ಮತ್ತು ಪಕ್ಷದ ಅಭಿವೃದ್ದಿ ಕಾರ್ಯಗಳು, ಜನಪರ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಮನವರಿಕೆ ಮಾಡಿಕೊಟ್ಟು ಹೆಚ್ಚು ಮಂದಿ ಪಕ್ಷದ ಸದಸ್ಯತ್ವನ್ನು ನೋಂದಾಯಿಸಿಕೊಳ್ಳುವಂತೆ ಮಾಡುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಲಿದ್ದೇವೆ. ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸದಸ್ಯತ್ವವನ್ನು ಮಾಡಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಪ್ರಯತ್ನವನ್ನು ಮಾಡಲಿದ್ದೇವೆ. ಪಕ್ಷದಿಂದ ಆಗುತ್ತಿರುವ ಅಭಿವೃದ್ಧಿ, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷದ ಸದಸ್ಯತ್ವ ಪಡೆಯಲು ಮುಂದೆ ಬರುತ್ತಿರುವವರ ಸಂಖ್ಯೆಯೂ ನಿರೀಕ್ಷೆಗೂ ಮೀರಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಗ್ರಾಮದ ಪ್ರತಿ ಮನೆಗೂ ಭೇಟಿ ನೀಡಿ ಸದಸ್ಯತ್ವವನ್ನು ನೋಂದಾಯಿತಿ ಗುರ್ತಿನ ಚೀಟಿಯನ್ನು ವಿತರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನದ ಬೆಂಗಳೂರು ಗ್ರಾಮಾಂತರ ಪ್ರಭಾರಿ ಕೇಶವಪ್ರಸಾದ್, ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಅಶ್ವಿನಿಶಂಕರ್, ಜಿಲ್ಲಾಧ್ಯಕ್ಷ ಆಂಜನೇಯಗೌಡ, ಪ್ರಧಾನ ಕಾರ್ಯದರ್ಶಿ ಮುರಳಿ, ಗ್ರಾಮಾಂತರ ಅಧ್ಯಕ್ಷ ಸೀಕಲ್ ಆನಂದಗೌಡ, ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಕೆ.ಎಸ್.ಕನಕ ಪ್ರಸಾದ್ ಇನ್ನಿತರೆ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net