ಬೈಕ್​ ಡಿಕ್ಕಿಯಾಗಿ ಪಾದಚಾರಿ ಸಾವು

Crime Logo
Published on

ರಾಣೆಬೆನ್ನೂರ: ಬೈಕ್​ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಾಕನೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ರಾಜಪ್ಪ ಲಕ್ಷ$್ಮಪ್ಪ ಸಾರಥಿ (62) ಮೃತರು.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್​ ಸವಾರನೊಬ್ಬ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಜಪ್ಪ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net