ವೈಮನಸ್ಸು ತೊರೆದು ಉತ್ತಮ ಜೀವನ

nivedit
Published on

ಗಂಗೊಳ್ಳಿ: ವೈಮನಸ್ಸು ತೊರೆದು ಎಲ್ಲರೂ ಒಂದಾಗಿ ಜೀವನ ನಡೆಸಬೇಕು. ಮಕ್ಕಳಿಗೆ ಬಾಲ್ಯದಲ್ಲಿ ಸಂಸ್ಕೃತಿ, ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಶಿಶು ಮಂದಿರಗಳಲ್ಲಿ ಸಂಪ್ರದಾಯಬದ್ಧವಾಗಿ ಮಕರ ಸಂಕ್ರಾತಿ ಮತ್ತು ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಸ್ತುತ್ಯರ್ಹ ಎಂದು ನಿಖಿತಾ ನೀಲಕಂಠ ಹೇಳಿದರು.

ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಂಗಣದಲ್ಲಿ ಮಂಗಳವಾರ ಮಕರ ಸಂಕ್ರಾತಿ ಉತ್ಸವ ಮತ್ತು ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆಯಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು.

ಶಿಶು ಮಂದಿರ ಸಂಚಾಲಕ ಡಾ.ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಆರತಿ ಬೆಳಗಿ ಪುಷ್ಪಾರ್ಚನೆ ಮೂಲಕ ಸಾಮೂಹಿಕ ಹುಟ್ಟುಹಬ್ಬ ಆಚರಿಸಲಾಯಿತು. ಶಿಶು ಮಂದಿರ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಮಾತಾಜಿ ಪ್ರೇಮಾ, ರತ್ನಾ ಮತ್ತಿತರರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿ, ಮಾಜಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net