ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆ ಮಾಡಿ

29-09-Shiva-4
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಧ್ಯಕ್ಷತೆಯಲ್ಲಿ ಶುಕ್ರವಾರ ಎಸ್‌ಸಿಪಿ, ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಇದ್ದರು.
Published on

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗೆ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವಯೊಳಗೆ ಬಳಕೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಪರಿಶಿಷ್ಟ ಜಾತಿ, ಗಿರಿಜನ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನುದಾನ ಕೈತಪ್ಪಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಕುರಿತು ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಕಾರ್ಯಕ್ರಮ ಅನುಷ್ಠಾನಕ್ಕೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನೀಡಲಾದ ನಮೂನೆಯಂತೆ ಮಾಹಿತಿ ಮತ್ತು ವರದಿಯನ್ನು ಸಿದ್ಧಪಡಿಸಿ ಅಕೃತ ಜಾಲತಾಣಕ್ಕೆ ಅಪ್‌ಲೋಡ್ ಮಾಡಬೇಕು.
ಅನುದಾನವನ್ನು ಬಾಕಿ ಉಳಿಸಿಕೊಳ್ಳದೆ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕು. ಹಲವು ಇಲಾಖೆಗಳು ಅನುದಾನವನ್ನು ಖರ್ಚು ಮಾಡದೆ ಕಡಿಮೆ ಪ್ರಮಾಣದ ಸಾಧನೆ ಮಾಡಿದ್ದು, ಕೂಡಲೇ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು.
ಜಿಲ್ಲೆಯ 33 ಇಲಾಖೆಗಳಿಗೆ ಈಗಾಗಲೇ ಎಸ್‌ಸಿಪಿ ಯೋಜನೆಯಡಿ ಶೇ.69.43ರಷ್ಟು ಹಾಗೂ ಟಿಎಸ್‌ಪಿ ಯೋಜನೆಯಡಿ ಶೇ.67.72ರಷ್ಟು ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಕೆಲವು ಇಲಾಖೆಗಳು ಅನುದಾನ ಬಳಕೆ ಮಾಡಿದ್ದು, ಕೆಲವು ಇಲಾಖೆಗಳು ಅನುದಾನ ಬಳಕೆಯಲ್ಲಿ ಹಿಂದಿವೆ. ಕೂಡಲೇ ನಿಗದಿತ ಅವಯೊಳಗೆ ಅನುದಾನ ಬಳಕೆಗೆ ಕ್ರಮಕೈಗೊಳ್ಳಬೇಕು ಎಂದು ಡಾ.ಕೆ.ಆರ್.ದುರಗೇಶ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಡಿಡಿಪಿಐ ಸುರೇಶ ಹುಗ್ಗಿ, ಜಿಲ್ಲಾ ಆಯುಷ್ ಅಕಾರಿ ಡಾ.ಶಂಕರಗೌಡ ಪಾಟೀಲ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net