ಕಡ್ಡಾಯವಾಗಿ ಬೆಳೆ ವಿಮೆ ಸೌಲಭ್ಯ ಕಲ್ಪಿಸಿ

09-01-Shiva-2
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಧ್ಯಕ್ಷತೆಯಲ್ಲಿ ಮಂಗಳವಾರ ಪ್ರಧಾನಮಂತ್ರಿ ಸಲ್ ಭೀಮಾ ಯೋಜನೆ ಮಧ್ಯಂತರ ಪ್ರತಿಕೂಲ ಸಿದ್ಧತೆ ಕುರಿತು ಸಭೆ ಜರುಗಿತು. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಉಪ ನಿರ್ದೇಶಕ ಜಯಪ್ರಕಾಶ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರವಿ, ವಿಮಾ ಕಂಪನಿ ಪ್ರತಿನಿಗಳಾದ ಜನಾರ್ದನ ತಿವಾರಿ, ವಿಜಯಕುಮಾರ, ವಿಠ್ಠಲ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಮೇಶ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರಿಗೆ ಕಡ್ಡಾಯವಾಗಿ ಬೆಳೆ ವಿಮೆ ಸೌಲಭ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಅಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ತಿಳಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪ್ರಧಾನಮಂತ್ರಿ ಸಲ್ ಭೀಮಾ ಯೋಜನೆ ಮಧ್ಯಂತರ ಪ್ರತಿಕೂಲ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಮಾ ಯೋಜನೆಯಲ್ಲಿ ರೈತರು ನೋಂದಣಿ ಮಾಡಿಸಲು ರೈತರು ಮುಂದೆ ಬರುವಂತೆ ಮಾಡಬೇಕು ಎಂದರು.
2023ರ ಮುಂಗಾರು ಹಂಗಾಮಿನಲ್ಲಿ ವಿಮಾ ಯೋಜನೆಯಡಿ ಜಿಲ್ಲೆಯಲ್ಲಿ 52,452 ರೈತರು ನೋಂದಾಯಿಸಿಕೊಂಡಿದ್ದು, 61,679 ಹೆಕ್ಟೇರ್ ಪ್ರದೇಶ ವಿಮಾ ವ್ಯಾಪ್ತಿಗೆ ಒಳಪಟ್ಟಿದೆ. ಹಿಂಗಾರು ಹಂಗಾಮಿನಲ್ಲಿ 26,174 ರೈತರು ನೋಂದಾಯಿಸಿಕೊಂಡಿದ್ದು, 31,220 ಹೆಕ್ಟೇರ್ ಪ್ರದೇಶ ವಿಮಾ ವ್ಯಾಪ್ತಿಗೆ ಒಳಪಟ್ಟಿದೆ. 2023ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಒಟ್ಟು 78,626 ರೈತರು ನೋಂದಾಯಿಸಿಕೊಂಡಿದ್ದು, ಎಲ್ಲ ರೈತರಿಗೆ ಪರಿಹಾರ ದೊರೆಯುವಂತೆ ಮಾಡಬೇಕು.
2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 9.57 ಕೋಟಿ ರೂ. ಪ್ರೀಮಿಯಂ ಪಾವತಿಸಲಾಗಿದ್ದು, ಹಿಂಗಾರು ಹಂಗಾಮಿನಲ್ಲಿ 1.82 ಕೋಟಿ ರೂ. ಪ್ರೀಮಿಯಂ ಪಾವತಿಸಲಾಗಿದೆ. ಸಂಬಂಧಪಟ್ಟ ವಿಮಾ ಕಂಪನಿಗಳು ಸಮರ್ಪಕ ರೀತಿಯಲ್ಲಿ ಪರಿಹಾರವನ್ನು ರೈತರಿಗೆ ಪಾವತಿಸಬೇಕು.
ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರೈತರು ಪಾವತಿಸಿದ ಪ್ರೀಮಿಯಂ ಹಾಗೂ ರೈತರಿಗೆ ಸಿಗಬೇಕಾದ ಪರಿಹಾರ ಕುರಿತು ಏಳು ದಿನಗಳಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಡಾ.ಕೆ.ಆರ್.ದುರಗೇಶ ಅಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ, ಉಪ ನಿರ್ದೇಶಕ ಜಯಪ್ರಕಾಶ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರವಿ, ವಿಮಾ ಕಂಪನಿ ಪ್ರತಿನಿಗಳಾದ ಜನಾರ್ದನ ತಿವಾರಿ, ವಿಜಯಕುಮಾರ, ವಿಠ್ಠಲ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಮೇಶ, ಸಂಖ್ಯಾ ಸಂಗ್ರಹಣಾಕಾರಿ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪಣ್ಣ ನಾಯಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net