ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ

CTD -------2
Published on

ಚಿತ್ರದುರ್ಗ: ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಎಡಿಸಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಶಾಖೆ ನಗರದ ಅಹಮದ್ ಪ್ಯಾಲೇಸ್‌ನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾದ ಜಿಲ್ಲೆಯ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಶಿಕ್ಷಣಕ್ಕೆ ಎಲ್ಲ ಜಾತಿ, ಧರ್ಮದವರಿಗೂ ಸಮಾನತೆ ಕಲ್ಪಿಸಿದ್ದಾರೆ. ಶಿಕ್ಷಣದಿಂದ ಏಕತೆಯ ಬದುಕು ಸಾಧ್ಯ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಭಿವೃದ್ಧಿ ನಿಗಮದಿಂದ ಸಾಕಷ್ಟು ಸೌಲಭ್ಯಗಳಿವೆ. ವಿದ್ಯೆ ಗುರಿ ಸಾಧಿಸಲು ನೆರವಾಗುತ್ತದೆ. ಬೆಂಗಳೂರು ಹಜ್ ಭವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಅರಿವು ಯೋಜನೆಯಡಿ ವಿದ್ಯಾರ್ಥಿ ವೇತನ ಸಿಗುತ್ತದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಮಾತನಾಡಿ, ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿದರೆ ಪಾಲಕರಿಗೂ ಸಂತೋಷವಾಗುತ್ತದೆ. ನಿವೃತ್ತ ನೌಕರರನ್ನು ಸೇರಿಸಿಕೊಂಡರೆ ಸಂಘದಿಂದ ಹೆಚ್ಚಿನ ಚಟುವಟಿಕೆಗಳನ್ನು ನಡೆಸಲು ಸಹಾಯವಾಗಲಿದೆ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮಾತನಾಡಿ, ಪ್ರತಿ ಮಗುವಿನಲ್ಲೂ ಇರುವ ಪ್ರತಿಭೆ ಗುರುತಿಸಬೇಕು ಎಂದರು,

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಇಕ್ಬಾಲ್ ಮಾತನಾಡಿ, ಮಕ್ಕಳನ್ನು ಆದಷ್ಟು ಮೊಬೈಲ್‌ನಿಂದ ದೂರವಿರಿಸಬೇಕು ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯವಾಗಲಿದೆ ಎಂದರು.

ಪ್ರಧಾನ ಕಾರ್ಯದರ್ಶಿ ತಾಜೀರ್‌ಭಾಷ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ನಯಾಜ್‌ಖಾನ್, ಡಿಡಿಪಿಐ ಎಂ.ಆರ್. ಮಂಜುನಾಥ್, ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಅಬುಲ್‌ಮಜೀದ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್, ಹಿರಿಯೂರು ನಗರಸಭೆ ಕಮಿಷನರ್ ಎ. ವಾಸೀಂ, ಕೆಪಿಟಿಸಿಎಲ್ ಇಂಜಿನಿಯರ್ ಸಾಜಿಯಾ ಪರ್ವಿನ್, ಡಾ. ಇಫ್ತಿಯಾರ್, ಮಹಮದ್‌ಆಲಿ, ವೀಣಾ, ಹನೀಸ್ ಸೈಯದ್ ಖುದ್ದೂಸ್ ಮತ್ತಿತರರು ಇದ್ದರು.

ರುಮಿನ್‌ಉದ್ದೀನ್, ಆಯಿಷಾ ಹುಸೇನ್ ಪ್ರಾರ್ಥಿಸಿದರು. ಆರ್.ಎಂ. ಮಹಮದ್‌ಖಾನ್ ಸ್ವಾಗತಿಸಿ, ಉಮರ್‌ಬಾಷಾ ವಂದಿಸಿದರು. ಕೆ. ಮಹಮದ್‌ಖಾಜಾಹುಸೇನ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net