ಶೈಕ್ಷಣಿಕ ಸೌಲಭ್ಯಗಳು ಸದುಪಯೋಗವಾಗಲಿ

08 TKE 2,2
ತರೀಕೆರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಮಹಾದೇವಪ್ಪ ಇತರರಿದ್ದರು.
Published on

ತರೀಕೆರೆ: ಸರ್ಕಾರ ಶಿಕ್ಷಣಕ್ಕೆ ಪೂರಕವಾಗಿ ವಿವಿಧ ಇಲಾಖೆಗಳ ಮೂಲಕ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆಯಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿರುವ ಕಟ್ಟಡ, ಇನ್ನಿತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ. ಇಲಾಖೆ ಮೂಲಕ ಹಲವು ಸೌಲಭ್ಯ ಕಲ್ಪಿಸಲಾಗುತ್ತಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮಕ್ಕಳು ಸರ್ಕಾರದ ಸವಲತ್ತು ಪಡೆದು ಶೈಕ್ಷಣಿಕ ಪ್ರಗತಿ ಸಾಧಿಸಿ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದರು. ಕಾರ್ಮಿಕ ಇಲಾಖೆ ನಿರೀಕ್ಷಕ ಮಹಾದೇವಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net