ಸರಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ

23kgl-3
Published on


ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ಕಾರ್ನರ್ ಸ್ಟೋನ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕೇಶವಮೂರ್ತಿ ಮಾತನಾಡಿ, ಪ್ರತಿ ವರ್ಷವೂ ನವೆಂಬರ್ ತಿಂಗಳಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೇರಿದಂತೆ ಇನ್ನಿತರ ಸೌಲಭ್ಯಗಳು ದೊರೆಯುತ್ತವೆ. ಇದನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.


ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ದುರ್ಬಲ ವರ್ಗದವರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಈ ವೇಳೆ ಕಾರ್ನರ್ ಸ್ಟೋನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ರೋಷನ್, ಉಪ ಪ್ರಾಂಶುಪಾಲೆ ಎಚ್.ರೋಹಿ ವಿನೋಲಿಯಾ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net