ಸರ್ಕಾರಿ ಸೌಲಭ್ಯಗಳು ಸದ್ಬಳಕೆಯಾಗಲಿ

11.NPK ..1
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾಕ್ಷರತಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಾಟೆಕಾಡು ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಮಾತನಾಡಿದರು.
Published on


ನಾಪೋಕ್ಲು: ಸರ್ಕಾರದ ಸವಲತ್ತುಗಳನ್ನು ಯುಕ್ತವಾಗಿ ಉಪಯೋಗಿಸುವುದು ಹಾಗೂ ಕಾಪಾಡುವುದು ನಮ್ಮ ಜವಾಬ್ದಾರಿ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾಕ್ಷರತಾ ಇಲಾಖೆ ಮಡಿಕೇರಿ ತಾಲೂಕು, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿಯ ವಾಟೆಕಾಡು ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ವಿವೇಕ ಶಾಲಾ ಕಟ್ಟಡದ ಹಾಗೂ ಸಭಾ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಮಾಡಬಾರದು. ಸ್ವಚ್ಛತೆ ಕಾಪಾಡುವುದು ನಮ್ಮ ಜವಾಬ್ದಾರಿ. ಡೆಂೆ ಜ್ವರ ಹೆಚ್ಚುತ್ತಿದ್ದು ಎಲ್ಲಿಯೂ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಓದಿಸುವತ್ತ ಗಮನಹರಿಸಬೇಕು ಎಂದರು.

ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎ.ಹಂಸಾ ಮಾತನಾಡಿ, ವಾಟೆಕಾಡು ಸರ್ಕಾರಿ ಶಾಲೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ಬರುತ್ತಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಮೊಣ್ಣಪ್ಪ ಮಾತನಾಡಿ, ಉತ್ತಮ ಜ್ಞಾನ ಪಡೆಯಲು ಶಿಕ್ಷಣ ಸಂಸ್ಥೆಗಳ ಅವಶ್ಯಕತೆ ಇದೆ. ಜ್ಞಾನ ದೇಗುಲಗಳನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದರು.

ಕಾರ್ಯಕ್ರಮದಲ್ಲಿ ವಾರ್ಡ್ ಸಮಿತಿ ಸದಸ್ಯ ಕೆ.ಪೊನ್ನಪ್ಪ, ಹಮೀದ್, ಕುಸುಮಾವತಿ, ಲಕ್ಷ್ಮೀ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜುಮೇರಿಯಾ, ಗೌರವ ಸದಸ್ಯ ಸುಬ್ರಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸೌಮ್ಯಾ, ಪಿಡಿಒ ಅಬ್ದುಲ್ಲ, ಬಿಆರ್‌ಸಿ ಗುರುರಾಜ್, ಮುಖ್ಯ ಶಿಕ್ಷಕಿ ಸುಗಂಧಿನಿ, ಶಿಕ್ಷಕ ಕುಮಾರಸ್ವಾಮಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net