ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

IMG-20240804-WA0011.jpg
Published on

ಬೆಳಗಾವಿ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿದ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ಅವರು ಭಾನುವಾರ ವಸತಿ ನಿಲಯಗಳಲ್ಲಿ ಆಹಾರ ಗುಣಮಟ್ಟ ಮತ್ತು ಮೂಲ ಸೌಕರ್ಯ ಪರಿಶೀಲಿಸಿದರು.

ಸವದತ್ತಿ ತಾಲೂಕಿನ ಇಂಚಲ ಗ್ರಾಪಂ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮತ್ತು ಮುರಗೋಡ ಗ್ರಾಪಂ ವ್ಯಾಪ್ತಿಯ ಮೆಟ್ರಿಕ್‌ಪೂರ್ವ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿದರು. ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಊಟೋಪಹಾರ, ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲಿಸಿದರು.

ನಿಲಯದ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಅವರು, ವಿದ್ಯಾರ್ಥಿಗಳಿಗೆ ಇಂದಿನ ಸ್ಥರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಯಾವ ರೀತಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಸಲಹೆಗಳನ್ನು ನೀಡಿದರು. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ವಿದ್ಯಾರ್ಥಿಗಳಿಗೆ ಒಳ್ಳೆಯ ಗುಣಮಟ್ಟದ ಆಹಾರದೊಂದಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸಲಾಗಿರುತ್ತದೆ. ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳಿಗೆ ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಸ್ಟಡಿ ಹಾಲ್, ಪೀಠೋಪಕರಣಗಳು ಇನ್ನಿತರ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮೆಟ್ರಿಕ್-ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ನೈಟ್‌ಡ್ರೆಸ್, ಟ್ರ್ಯಾಕ್‌ಸೂಟ್ ಕೂಡ ನೀಡಲಾಗುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ವಸತಿ ನಿಲಯದ ವಾರ್ಡನ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net