

ಬೀರೂರು: ಕೇಂದ್ರ ಸರ್ಕಾರದ ಪಿಎಂ ಶ್ರೀಯೋಜನೆಯನ್ನು ಶಾಲೆಯ ಬೋಧಕ ವರ್ಗ ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಶೃಂಗೇರಿ ಬಿಆರ್‌ಸಿ ಗಂಗಾಧರಪ್ಪ ಹೇಳಿದರು.
ಬಿ.ಹೆಚ್.ರಸ್ತೆಯ ಪಿಎಂ ಶ್ರೀಸರ್ಕಾರಿ ಹಿರಿಯ ಬಾಲಕರ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಶಾಲಾ ವಸಂತ ವೈಭವ ಮತ್ತು ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಳಿವಿನಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ಶಿಕ್ಷಕ ವರ್ಗ, ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳ ಸಂಘ, ಪಾಲಕರು ಶ್ರಮಿಸಿ ಮಕ್ಕಳ ದಾಖಲಾತಿ, ಎಲ್.ಕೆ.ಜಿ, ಯು.ಕೆ.ಜಿ ಆರಂಭ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ ಹಾಗೂ ವಿದ್ಯಾರ್ಥಿಗಳಿಗೆ ಮನಸೆಳೆವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿ ಪಿಎಂ ಶ್ರೀ ಯೋಜನೆಗೂ ಆಯ್ಕೆಯಾಗುವಂತಾಗಿರುವುದು ಶ್ಲಾಘನೀಯ ಎಂದರು.
ಈ ಯೋಜನೆಯಿಂದ ಬಿಡುಗಡೆಯಾಗುವ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಶಾಲೆಯನ್ನು ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆ ಕಡಿಮೆ ಇಲ್ಲದಂತೆ ಮಾಡಬೇಕು. ಇದಕ್ಕಾಗಿ ಶಾಲೆಗೆ ನಮ್ಮ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಪುರಸಭೆ ಸದಸ್ಯೆ ಮೀನಾಕ್ಷಮ್ಮ ಮಾತನಾಡಿ, ಶಿಕ್ಷಣ ಕದಿಯಲಾಗದ ಸಂಪತ್ತು. ಆಸ್ತಿ, ಅಂತಸ್ತು, ಹಣ ಸಂಪಾದನೆ ಮಾಡುವುದಕ್ಕಿಂತ ಶಿಕ್ಷಣ ಎಂಬ ಸಂಪತ್ತನ್ನು ಸಂಪಾದನೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಮುಖ್ಯಶಿಕ್ಷಕ ಚಂದ್ರಶೇಖರ್, ಬಿಆರ್‌ಸಿ ವೈಶಾಲಿ ಅಡಿಗ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವರಮನೆ ಗಿರೀಶ್, ಕಾರ್ಯದರ್ಶಿ ಗುರುಪ್ರಸಾದ್, ಶಿಕ್ಷಕಿ ಸೌಭಾಗ್ಯಮ್ಮ, ಉಪಾಧ್ಯಕ್ಷೆ ಪೂರ್ಣಿಮಾ, ಎಸ್‌ಡಿಎಂಸಿ ಸದಸ್ಯರಾದ ಶಬ್ಬೀರ್ ಅಹಮ್ಮದ್, ಆರ್ಿ ಇದ್ದರು.