

ಗೋಕಾಕ: ಜನಸಾಮಾನ್ಯರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆ ರೂಪಿಸಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಸೋಮವಾರ ಪಟ್ಟಣ ಪಂಚಾಯಿತಿಯ ವಿವಿಧ ಯೋಜನೆಗಳಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ಹಾಗೂ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ, ಅಧಿಕಾರವಧಿಯಲ್ಲಿ ಕ್ಷೇತ್ರದ ಜನರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಮೂಲಕ ಜನ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇನೆ ಎಂದರು.
ಅಂಕಲಗಿ-ಅಕ್ಕತಂಗೇರಹಾಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2023-24 ಹಾಗೂ 2024-25ನೇ ಸಾಲಿನ ಎಸ್‌ಎ್ಸಿ ಯೋಜನೆಯಡಿ 5 ಜನ ಅಂಗವಿಕಲರಿಗೆ ತ್ರಿಚಕ್ರ ವಾಹನ, 5 ಲಾನುಭವಿಗಳಿಗೆ ಅಡುಗೆ ಅನಿಲ, 5 ಸೋಲಾರ್ ವಿದ್ಯುತ್ ದೀಪ, ಪೌರ ಕಾರ್ಮಿಕ ಅವಲಂಬಿತ 7ಜನರಿಗೆ ಹೊಲಿಗೆ ಯಂತ್ರ ಹಾಗೂ ಪೌರ ಕಾರ್ಮಿಕರಿಗೆ ಸಮವಸ ಮತ್ತು ಪರಿಕರ ವಿತರಿಸಲಾಯಿತು. 15ನೇ ಹಣಕಾಸು ಯೋಜನೆಯಡಿ ಪಟ್ಟಣ ಪಂಚಾಯಿತಿಯ 2 ಟ್ರ್ಯಾಕ್ಟರ್‌ಗಳಿಗೆ ಪೂಜೆ ನೆರವೇರಿಸಲಾಯಿತು.
ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ, ಎಂ.ಎಲ್.ತೋಳಿನವರ, ಮುಖಂಡ ಭೀಮಗೌಡ ಪೋಲಿಸಗೌಡರ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.