

ಗೊರೇಬಾಳ: ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಟಿಬಿಪಿ ಕಾಡಾ ಎಇಒ ಬಸವರಾಜ ಸೂಗೂರ ಹೇಳಿದರು.
ಗ್ರಾಮದ ಶರಣಬಸವೇಶ್ವರರ ಕಲ್ಯಾಣ ಮಂಟಪದಲ್ಲಿ ಬುಧವಾರ ಮೈಸೂರಿನಿಂದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಸಂದಾಯ ಮಾಡುವ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದು. ಸರಿಯಾದ ದಾಖಲಾತಿ ಒದಗಿಸುವ ಮೂಲಕ ಯೋಜನೆಯ ಲಾಭ ಪಡೆಯಲು ಮುಂದಾಗಬೇಕು ಎಂದರು.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಐದು ಕಡೆ ಚಾಲನೆ
ಪಿಡಿಒ ಯಂಕೋಬ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಬಸಮ್ಮ ಮ್ಯಾಗಳಮನಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು, ಗೃಹಲಕ್ಷ್ಮೀ ಪಲಾನುಭವಿಗಳು ಇದ್ದರು.