ಗ್ರಂಥಾಲಯ ಸದ್ಬಳಕೆ ಆಗಲಿ

Make good use of the library.
ವಿಜಯಪುರದ ಸಾರಿಪುತ್ರ- ಬೋಧಿಧಮ್ಮ ಬುದ್ಧವಿಹಾರದಲ್ಲಿ ನಿರ್ಮಿಸಿದ ನೂತನ ಗ್ರಂಥಾಲಯವನ್ನು ಕಲ್ಲಪ್ಪ ತೊರವಿ ಉದ್ಘಾಟಿಸಿದರು. ಅನಿಲ ಹೊಸಮನಿ ಮತ್ತಿತರರಿದ್ದಾರೆ.
Published on

ವಿಜಯಪುರ: ಸಮಸಮಾಜದ ಕನಸು ಕಂಡಿದ್ದ ಭಗವಾನ ಬುದ್ಧ, ಬಸವಣ್ಣನವರು ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಕುರಿತು ಎಲ್ಲರೂ ತಿಳಿದುಕೊಳ್ಳುವ ಅಗತ್ಯವಿದೆ ಎಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲಪ್ಪ ತೊರವಿ ಹೇಳಿದರು.

ನಗರದ ಸಾರಿಪುತ್ರ- ಬೋಧಿಧಮ್ಮ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ ದಿನ ಸೋಮವಾರ ನೂತನ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಸದ್ಯ ಉದ್ಘಾಟನೆಯಾದ ಗ್ರಂಥಾಲಯದಲ್ಲಿ ಮಹನೀಯರ ಕುರಿತು ವಿವಿಧ ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಸಂಗ್ರಹಿಸಲಾಗಿದೆ. , ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನ್ಯಾಯವಾದಿ ಕೆ.ಎಫ್. ಅಂಕಲಗಿ, ಜಿ.ಪಂ. ಉಪಕಾರ್ಯದರ್ಶಿ ನಿಂಗಪ್ಪ ಗೋಠೆ, ತಹಸೀಲ್ದಾರ್ ಪ್ರಶಾಂತ ಚನಗೊಂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಬೋವಿ, ಬುದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ, ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕ ಅನಿಲ ಹೊಸಮನಿ, ರಾಜೇಶ ತೊರವಿ, ಮನೋಜ ಕೋಟ್ಯಾಳ, ದಶವಂತ ಗುನ್ನಾಪುರ, ಸಾಬು ಚಲವಾದಿ, ಸುರೇಶ ಗೊಣಸಗಿ, ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಪ್ರಭುಗೌಡ ಪಾಟೀಲ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚೆನ್ನು ಕಟ್ಟಿಮನಿ, ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ಚಲವಾದಿ, ಅಭಿಷೇಕ ಚಕ್ರವರ್ತಿ, ಡಾ. ಸುಜಾತಾ ಚಲವಾದಿ, ಅನ್ನಪೂರ್ಣ ಬೆಳ್ಳೆನವರ, ಶಾರದಾ ಹೊಸಮನಿ, ಭಾರತಿ ಹೊಸಮನಿ, ಸುಜಾತಾ ಚಂಚಲಕರ, ಭೀಮಶಿ ಹಿಪ್ಪರಗಿ, ಎಂ.ಬಿ. ಹಳ್ಳದಮನಿ, ಲಕ್ಷ್ಮಣ ಗೊಣಸಗಿ, ಬಸವರಾಜ ಹೋಳ್ಕರ, ಕೆ.ಎಂ. ಶಿವಶರಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net