ಜನತಾ ನ್ಯಾಯಾಲಯ ಸದ್ಬಳಕೆ ಮಾಡಿಕೊಳ್ಳಿ

ಕುಷ್ಟಗಿಯ ಬಸವ ಭವನದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯ ಕುರಿತ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ ಉದ್ಘಾಟಿಸಿದರು. ತಹಸೀಲ್ದಾರ್ ಅಶೋಕ ಶಿಗ್ಗಾವಿ, ಗ್ರೇಡ್-2 ತಹಸೀಲ್ದಾರ್ ರಜನಿಕಾಂತ, ತಾಪಂ ಇಒ ಪಂಪಾಪತಿ ಹಿರೇಮಠ, ವಕೀಲರ ಸಂಘದ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಇತರರಿದ್ದರು.

Published on

ಕುಷ್ಟಗಿ: ಸಾರ್ವಜನಿಕರು ಕಾಯಂ ಜನತಾ ನ್ಯಾಯಾಲಯದ ಸದುಪಯೋಗ ಪಡೆಯಿರಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ ಹೇಳಿದರು.

ಪಟ್ಟಣದ ಬಸವ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ ಹಾಗೂ ತಾಪಂ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನತಾ ನ್ಯಾಯಾಲಯಗಳಲ್ಲಿ ಸಾರ್ವಜನಿಕರ ಉಪಯುಕ್ತ ಸೇವೆಗಳ ವ್ಯಾಜ್ಯಗಳನ್ನು ರಾಜಿ ಸಂಧಾನದಿಂದ ತ್ವರಿತ ಗತಿಯಲ್ಲಿ ಪರಿಹರಿಸಲಾಗುವುದು. ಧಾರವಾಡ ಜನತಾ ನ್ಯಾಯಾಲಯ ವ್ಯಾಪ್ತಿಗೆ ಒಳಪಡುವ ಕೊಪ್ಪಳ ಪೀಠದಲ್ಲಿ ಅರ್ಜಿ ಸಲ್ಲಿಸಬಹುದು. ಎಂದರು.

ಪ್ಯಾನಲ್ ವಕೀಲ ಆನಂದ ಡೊಳ್ಳಿನ್ ಮಾತನಾಡಿ, ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂ-ಸಾರಿಗೆ, ಜಲಸಾರಿಗೆ, ವಾಯು ಸಾರಿಗೆ ಸೇವೆಗಳು, ಅಂಚೆ, ದೂರವಾಣಿ ಸೇವೆಗಳು, ವಿದ್ಯುತ್, ಸಾರ್ವಜನಿಕ ನೈರ್ಮಲ್ಯ ವ್ಯವಸ್ಥೆ, ವಿಮೆ, ಆಸ್ಪತ್ರೆ, ಹಣಕಾಸು ಸಂಸ್ಥೆಗಳು, ಬ್ಯಾಂಕ್, ಶಿಕ್ಷಣ ಸೇರಿದಂತೆ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಜನತಾ ನ್ಯಾಯಾಲಯ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.

ತಹಸೀಲ್ದಾರ್ ಅಶೋಕ ಶಿಗ್ಗಾವಿ, ಗ್ರೇಡ್-2 ತಹಸೀಲ್ದಾರ್ ರಜನಿಕಾಂತ, ತಾಪಂ ಇಒ ಪಂಪಾಪತಿ ಹಿರೇಮಠ, ವಕೀಲರ ಸಂಘದ ತಾಲೂಕಾಧ್ಯಕ್ಷ ದೊಡ್ಡನಗೌಡ ಪಾಟೀಲ್, ಸಹಾಯಕ ಸರ್ಕಾರಿ ಅಭಿಯೋಜಕ ಎಲ್.ರಾಯನಗೌಡ, ವಕೀಲರಾದ ಎಸ್.ಜಿ.ಪಾಟೀಲ್, ಎಸ್.ಕೆ.ಪಾಟೀಲ್, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net