

ತರೀಕೆರೆ: ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ ಎಂದು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶಾರದ ಹೇಳಿದರು.
ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರ ಕ್ರಿಯಾತ್ಮಕ ಚಟುವಟಿಕೆೆಯಿಂದ ಸಮಾಜದ ವಿಕಸನವಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಲ್ಲಿ ವ್ಯವಹಾರ ಜ್ಞಾನ ಹೆಚ್ಚಿಸಲು ನೆರವಾಗುವ ಜತೆಗೆ ಸಬಲೀಕರಣಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ. ಯೋಜನೆ ಸದ್ಭಳಕೆ ಮಾಡಿಕೊಳ್ಳುವುದರಿಂದ ಪ್ರಗತಿಯತ್ತ ಹೆಜ್ಜೆ ಹಾಕಬಹುದು ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಜಿ.ಶಿವಪ್ಪ, ಆರೋಗ್ಯ ನಿರೀಕ್ಷಕ ತಿಪ್ಪೇಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಂದಿನಿ, ಸೇವಾ ಪ್ರತಿನಿಧಿಗಳಾದ ಪುಷ್ಪಾಲತಾ, ಶಶಿಕಲಾ, ಶೃತಿ ಮತ್ತಿತರರಿದ್ದರು.