ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಲಿ

13ark1
Published on


ಅರಕಲಗೂಡು : ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿ ಯಶ್ವಸಿಗೊಳಿಸುವಂತೆ ಶಾಸಕ ಎ.ಮಂಜು ತಿಳಿಸಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಚ್ಚು ಮಹತ್ವಪೂರ್ಣವಾಗಿ ಆಚರಿಸುವ ಸಂಬಂಧ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮದ ಯಶಸ್ವಿಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿ ಸನ್ಮಾನಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯಾ, ತಾಪಂ ಇಒ ಪ್ರಕಾಶ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net