

ಗುಂಡ್ಲುಪೇಟೆ: ಕೋಲಾರ ಜಿಲ್ಲೆ ಬಂಗಾರಪೇಟೆ ತಹಸೀಲ್ದಾರ್ ಹತ್ಯೆ ಖಂಡಿಸಿ ಸರ್ಕಾರಿ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಮಹದೇವಪ್ಪ ನೇತೃತ್ವದಲ್ಲಿ ವಿವಿಧ ಇಲಾಖೆಯ ನೌಕರರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ನಿರ್ಭಯವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನು ತಹಸೀಲ್ದಾರ್ ನಂಜುಂಡಯ್ಯ ಅವರಿಗೆ ಸಲ್ಲಿಸಿದರು.
ಹಂಗಳ ನಾಡಕಚೇರಿಯ ರೆವಿನ್ಯೂ ಅಧಿಕಾರಿ ರಾಜಕುಮಾರ್, ಗ್ರಾಮಲೆಕ್ಕಾಧಿಕಾರಿಗಳಾದ ನದೀಮ್ ಹುಸೇನ್, ಸಂತೋಶ್, ದಾಕ್ಷಾಯಿಣಿ, ರಾಜೇಶ್ವರಿ ಇತರರು ಇದ್ದರು.