ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ: ಕೆ.ಎಂ.ಗಣೇಶ್ ಕರೆ

MDK07
Published on

ಮಡಿಕೇರಿ: ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯತಿ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ, ಸ್ಥಳೀಯ ಮುಖಂಡರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಕರೆ ನೀಡಿದ್ದಾರೆ.


ಚೆನ್ನಯ್ಯನಕೋಟೆ ಭಾಗದ ಜೆಡಿಎಸ್ ನಾಯಕರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಕೆ.ಎಂ.ಗಣೇಶ್, ಗ್ರಾಮ ಪಂಚಾಯತಿ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಥಳೀಯ ನಾಯಕರು ಒಗ್ಗೂಡಿ ಕೆಲಸ ಮಾಡಬೇಕೆಂದು ಹೇಳಿದರು.


ಈ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತ ಹೋಬಳಿ ಅಧ್ಯಕ್ಷ ಮುಸ್ತಫಾ ಕಾಂಗ್ರೆಸ್ ತೊರೆದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಕೆ.ಎಂ.ಗಣೇಶ್ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು.


ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ.ಮಂಜುನಾಥ್, ಜೆಡಿಎಸ್ ಮುಖಂಡರಾದ ಡೆನ್ನಿ ಬರೋಸ್, ಸುನಿಲ್, ಟಿ.ಆರ್.ಹರ್ಷ,ಸ್ಥಳೀಯ ನಾಯಕರಾದ ವಿ.ಸಿ.ದೇವರಾಜ್, ಎಚ್.ಎಸ್.ರಾಜೇಶ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಚ್.ಬಿ.ಗಣೇಶ್, ಅಬ್ದುಲ್ ರೆಹಮಾನ್, ಮಹೇಶ್ ಹಾಗೂ ಶಿವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net