ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಲಿ

PH 02
Published on

ಚಿಂಚೋಳಿ: ಗಡಿ ತಾಲೂಕಿನ ಪ್ರತಿ ಗ್ರಾಮಗಳಲ್ಲಿನ ಅಂಗಡಿಗಳಲ್ಲಿ ವ್ಯಾಪಾರಸ್ಥರು ಕನ್ನಡ ನಾಮಫಲಕ ಅಳವಡಿಸಬೇಕು. ಅಂದಾಗಲೇ ಭಾಷೆ ಬೆಳೆಯಲು ಸಾಧ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಕಾಶೀನಾಥ ಧನ್ನಿ ಅಭಿಪ್ರಾಯಪಟ್ಟರು.

ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪುರಸಭೆಯಿಂದ ಕನ್ನಡ ಭಾಷೆ ಬೆಳವಣಿಗೆ ಹಾಗೂ ಪದವೀಧರರ ಮತಪಟ್ಟಿಯಲ್ಲಿ ಹೆಸರು ನೋಂದಣಿ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾದಲ್ಲಿ ಮಾತನಾಡಿ, ಸಾರ್ವಜನಿಕರು, ವ್ಯಾಪಾರಸ್ಥರು, ಉದ್ಯಮಿಗಳು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭಾಷೆ, ನೆಲೆ ಹಾಗೂ ಜಲ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಈಶಾನ್ಯ ವಲಯ ಪದವೀಧರರ ಚುನಾವಣೆ ಸಮೀಪಿಸುತ್ತಿದ್ದು, ಪ್ರತಿಯೊಬ್ಬ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ತಹಸಿಲ್ ಕಚೇರಿಯಲ್ಲಿ ನಮೂನೆ 18 ಫಾರ್ಮ್ ಲಭ್ಯವಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾಪಂ ಇಒ ಶಂಕರ ರಾಠೋಡ್, ಪಶು ಆರೋಗ್ಯ ಅಧಿಕಾರಿ ಧನರಾಜ ಬೊಮ್ಮಾ, ಅಧಿಕಾರಿಗಳಾದ ವೆಂಕಟೇಶ ದುಗ್ಗನ್, ಸುಭಾಷ ಸುಲೇಪೇಟ, ಪಿಎಸ್‌ಐ ಹಣಮಂತ ಬಂಕಲಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net