

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸಂಪೂರ್ಣವಾಗಿ ವಾದಕ ವಸ್ತುಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ವಾತನಾಡಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯಕ್ಕೆ ವಾರಕವಾಗಿರುವ ಗಾಂಜಾ ಸೇರಿ ವಾದಕ ವಸ್ತುಗಳ ಸೇವನೆಗೆ ಅವಕಾಶ ನೀಡಬಾರದು. ಅಕ್ರಮಗಳ ತಡೆಗೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಾತ್ರವಲ್ಲದೇ ರಾಜ್ಯದಲ್ಲಿ ಗಾಂಜಾ ಅವ್ಯಾಹತವಾಗಿ ಬಳಕೆಯಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ದೊಡ್ಡದೊಡ್ಡ ಮಟ್ಟದಲ್ಲಿ ನಾನಾ ಜಾಲಗಳು ಸಕ್ರಿಯವಾಗಿ ಅಕ್ರಮ ವ್ಯವಹಾರ ಮತ್ತು ಮಾರಾಟ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ. ಇದಕ್ಕೆ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳೇ ಆಕರ್ಷಿತರಾಗಿ, ಕೊನೆಗೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದರು. ಯುವ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿಸಿಕೊಂಡಿರುವ, ಇದಕ್ಕೆ ಪೊಲೀಸರು ಕುಮ್ಮಕ್ಕು ನೀಡುತ್ತಿರುವಂತಹುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಬೇಕು. ಜಿಲ್ಲೆಯ ಎಲ್ಲೂ ಮಟ್ಕಾ, ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಕೋಳಿ ಪಂದ್ಯ ಸೇರಿ ಯಾವುದೇ ಅಕ್ರಮ ಚಟುವಟಿಕೆ ನಡೆಯಬಾರದು ಎಂದರು. ಇತ್ತೀಚೆಗೆ ಹೆಚ್ಚಳವಾಗುತ್ತಿರುವ ಸೈಬರ್ ಅಪರಾಧಗಳ ಜಾಲಕ್ಕೆ ಜನರು ಸಿಲುಕಿ, ವಂಚನೆಗೊಳಗಾಗದಿರಲು ಅರಿವು ಮೂಡಿಸಬೇಕು. ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಕಡಿಮೆ ಆಗಬೇಕು. ಜಿಲ್ಲೆಯಲ್ಲಿ ಕಾಡುತ್ತಿರುವ ಬಾಲ್ಯ ವಿವಾಹ ಪ್ರಕರಣಗಳಿಗೆ ಅವಕಾಶ ನೀಡದಿರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇತರ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಎನ್.ಭಾಸ್ಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಐ.ಖಾಸಿಂ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೇಶವರೆಡ್ಡಿ ಮತ್ತಿತರರು ಇದ್ದರು.
ಪ್ರಮುಖ ವಿಚಾರಗಳ ಚರ್ಚೆ
ಸಂಚಾರಿ ನಿಯಮಗಳ ಉಲ್ಲಂಘನೆಯ ಪ್ರಕರಣ ದಾಖಲು, ದಂಡ ವಸೂಲಿ, ಹೆಚ್ಚಿನ ಅಪಘಾತಗಳು ಸಂಭವಿಸುವುದಕ್ಕೆ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್‌ಗಳು, ಸುಗಮ ಮತ್ತು ಸುರಕ್ಷತೆಗೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದರು. ಪ್ರತಿಯೊಬ್ಬ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ವಾಹನ ಚಾಲನೆ ಮಾಡಬೇಕು. ಇದರಲ್ಲಿ ಮೊದಲು ಸರ್ಕಾರಿ ನೌಕರರು ಸಾರ್ವಜನಿಕರಿಗೆ ಮಾದರಿಯಾಗಬೇಕು. ನಿಯಮಗಳನ್ನು ಪಾಲಿಸುವುದರ ಜತೆಗೆ ಜನರಲ್ಲಿ ಅರಿವು ಮೂಡಿಸಲು ಮುಂದಾಗಬೇಕು. ಆಗ ವಾತ್ರ ಅಪಘಾತಗಳ ತಡೆ ಮತ್ತು ಪ್ರಾಣಹಾನಿಯನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಯಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂನೆ ಪ್ರಕರಣಗಳು ಕಂಡು ಬಂದಲ್ಲಿ ತ್ವರಿತವಾಗಿ ಭೇದಿಸಿ ತಪ್ಪಿತ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲು ಸೂಚಿಸಿದರು.
ಕಾರಾಗೃಹಗಳಲ್ಲಿ ಹೆಚ್ಚಿನ ನಿಗಾ
ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಯು ನಿರಾತಂಕವಾಗಿ ನಡೆಯುತ್ತಿರುವುದರ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದು, ಇದಕ್ಕೆ ಸಮರ್ಪಕ ನಿಗಾ ವಹಿಸಲು ಸಚಿವರು ಇಲಾಖೆಗೆ ಸೂಚಿಸಿದರು. ಈಗಾಗಲೇ ಕಾರಾಗೃಹದಲ್ಲಿ ನಿಯಮಗಳ ಪಾಲನೆ, ದಾಖಲೆಗಳ ನಿರ್ವಹಣೆ, ಲೋಪಗಳು ಮತ್ತು ಪರಿಹಾರ ಕೆಲಸಗಳ ಬಗ್ಗೆ ಚರ್ಚಿಸಲಾಗಿದೆ. ಸಂಬಂಧಪಟ್ಟ ಸಿಬ್ಬಂದಿ ಸೂಕ್ತ ರೀತಿಯಲ್ಲಿ ನಿಗಾ ವಹಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.