ಶೌಚಗೃಹ ಬಳಕೆ ಕಡ್ಡಾಯವಾಗಲಿ: ಸಿ.ಇ.ಒ ರಾಹುಲ್ ಶಿಂಧೆ

Screenshot_2024-11-19-18-47-23-42.jpg
Published on

ಬೆಳಗಾವಿ: ಗ್ರಾಮೀಣ ಪ್ರದೇಶದಲ್ಲಿ ಮನೆ-ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವುದರ ಜೊತೆಗೆ ಅದರ ಬಳಕೆಯು ಕಡ್ಡಾಯವಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಹೇಳಿದರು.

ತಾಲೂಕಿನ ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೊಂಡಸಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನಾಚರಣೆಯ ಉದ್ಘಾಟಿಸಿ ಅವರು ಮಾತನಾಡಿದರು. ವಿದೇಶಕ್ಕೆ ಹೋಲಿಸಿದರೆ ನಮ್ಮ ದೇಶದಲ್ಲಿ ಶೌಚಗೃಹ ಕಟ್ಟಿಸಿದ್ದರು ಬಳೆಕೆಯು ಕಡಿಮೆ ಪ್ರಮಾದಲ್ಲಿ ಇದೆ. ಸಮಾಜದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೌಚಗೃಹ ಬಳೆಕೆ ಪ್ರಮಾಣ ಹೆಚ್ಚಾಗಬೇಕಿದೆ ಎಂದರು.

ಇದಕ್ಕೂ ಮೊದಲು ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾಹಿತಿಯನ್ನು ಪಡೆದುಕೊಂಡರು.

ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಮಹಾದೇವಿ ಬಾಳಾರಾಮ ಪಾಟೀಲ, ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಹೆಡಗೆ, ಸಹಾಯಕ ನಿರ್ದೇಶಕ (ಗ್ರಾ.ಉ) ಬಿ.ಡಿ ಕಡೇಮನಿ, ಬೆಳಗಾವಿ ವಿಭಾಗ ಕಾರ್ಯಪಾಲಕ ಅಭಿಯಂತರರು (ಪಂರಾ) ಶಶೀಕಾಂತ ನಾಯಕ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಮೋದಾರ ಪಿಡಿಒ ಶ್ವೇತಾ ಡಿ.ಆರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net