ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಿ

24 ckm 4
ಚಿಕ್ಕಮಗಳೂರಿನ ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ನಡೆದ ಸ್ವಚ್ಛ ವಾಹಿನಿ ವಾಹನ ಚಾಲನಾ ತರಬೇತಿ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ಡಿಆರ್‌ಡಿಎ ಕೋಶ ಯೋಜನಾ ನಿರ್ದೇಶಕಿ ನಯನಾ ವಾಹನ ಚಾಲನಾ ಪರವಾನಗಿ ವಿತರಣೆ ಮಾಡಿದರು. ಯೋಗೇಂದ್ರ ಪ್ರತಾಪ್ ಸಿಂಗ್, ಆರ್.ಕೆ.ಬಾಲಚಂದ್ರ, ಕೆ.ಕೆ.ರಾಜೇಂದ್ರ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಗಳ ಸದುಪಯೋಗಪಡಿಸಿಕೊಂಡು ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಡಿಆರ್‌ಡಿಎ ಕೋಶ ಯೋಜನಾ ನಿರ್ದೇಶಕಿ ನಯನಾ ತಿಳಿಸಿದರು.

ನಗರದ ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಲ್ಲಿ ನಡೆದ ಸ್ವಚ್ಛ ವಾಹಿನಿ ವಾಹನ ಚಾಲನಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸ್ವಚ್ಛತೆಯನ್ನು ಕಾಪಾಡುವಲ್ಲಿ ಬಹಳ ಮುತುವರ್ಜಿ ವಹಿಸುತ್ತಾರೆ. ಇವರಿಗೆ ಲಘು ಮೋಟಾರ್ ವಾಹನಚಾಲನ ಸ್ವಚ್ಛ ವಾಹಿನಿ ತರಬೇತಿಯನ್ನು ನೀಡುವುದರಿಂದ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಮಹಿಳಾ ಸಬಲೀಕರಣವು ಸರ್ಕಾರದ ಮುಖ್ಯ ಉz್ದೆÃಶವಾಗಿದ್ದು, ಸರ್ಕಾರದ ವಿವಿಧ ಯೋಜನೆಯ ಸದುಪಯೋಗ ಪಡೆದು ಸ್ವತಂತ್ರ ಬದುಕನ್ನು ರೂಪಿಸಿಕೊಳ್ಳುವಂತೆ ತಿಳಿಸಿದರು.
ಜಿಪಂ ಎನ್‌ಆರ್‌ಎಲ್‌ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ ಕೆ.ಕೆ ಮಾತನಾಡಿ, ಜಿಲ್ಲೆಯಲ್ಲಿ ೨೨೬ ಗ್ರಾಮ ಪಂಚಾಯಿತಿಗಳಿವೆ. ಇದರಲ್ಲಿ ೨೦೦ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಲಾ ಓರ್ವ ಮಹಿಳೆಗೆ ಲಘು ಮೋಟಾರ್ ವಾಹನ ಚಾಲನ ತರಬೇತಿಯನ್ನು ನೀಡಲಾಗುತ್ತಿದೆ. ಶೇ.೬೦ ಕ್ಕಿಂತಲೂ ಹೆಚ್ಚಿನ ಜನರು ಸ್ವಚ್ಛ ವಾಹಿನಿ ವಾಹನವನ್ನು ಚಲಾಯಿಸುತ್ತಾ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದ ಅವರು ಸರ್ಕಾರದಿಂದ ಸಿಗುವಂತಹ ಸೌಲಭ್ಯವನ್ನು ಬಳಸಿಕೊಂಡು ಮಾದರಿ ಚಾಲಕರಾಗಿ ಮುಂದುವರೆಯಿರಿ ಎಂದರು.
ಭಾರತ ಸರ್ಕಾರದ ಗ್ರಾಮೀಣ ಮಂತ್ರಾಲಯದ ಆರ್. ಕೆ.ಬಾಲಚಂದ್ರ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಸಂಸ್ಥೆಯು ಆವಿರತವಾಗಿ ಶ್ರಮಿಸುತ್ತಿದೆ. ಆತ್ಮ ವಿಶ್ವಾಸ ಮತ್ತು ತಾಳ್ಮೆಯಿಂದ ಯಾವುದೇ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸಬಹುದು ತರಬೇತಿಯನ್ನು ವ್ಯವಸ್ಥಿತವಾಗಿ ಪಡೆದು ನಿಮ್ಮ ಬದುಕಿನ ದೀಪವನ್ನು ನೀವೆ ಹಚ್ಚುವಂತರಾಗಿ ಎಂದು ಹೇಳಿದರು.
ಆರ್ ಸೆಟಿ ಸಂಸ್ಥೆಯ ನಿರ್ದೇಶಕ ಯೋಗೇಂದ್ರ ಪ್ರತಾಪ್ ಸಿಂಗ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೂನಿಯನ್ ಬ್ಯಾಂಕ್ ಸಿಬ್ಬಂದಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net