ಮಕ್ಕಳ ದಸರಾಕ್ಕೆ ವಿವಿಧ ಸ್ಪರ್ಧೆಗಳು

makkala dasara
Published on

ಮಡಿಕೇರಿ:

ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಸೆ. 30 ರಂದು ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ 12 ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮತ್ತು ಮಕ್ಕಳ ದಸರಾ ಸಂಚಾಲಕ ಎಚ್.ಟಿ. ಅನಿಲ್ ತಿಳಿಸಿದ್ದಾರೆ.

ಮಕ್ಕಳ ದಸರಾ ಸ್ಪರ್ಧೆಗಳು ಸೆ.30 ರಂದು ಮಂಗಳವಾರ ಬೆಳಗ್ಗೆ 9.30 ಗಂಟೆಯಿAದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ.

ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಠ 5 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾರ್ಥಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಠ ಇಬ್ಬರು ಸ್ಪರ್ಧಿಗಳಿಗೆ ಅವಕಾಶವಿದೆ.

10 ನಿಮಿಷದ ಪ್ರದರ್ಶನಾವಧಿಯುಳ್ಳ ಮಂಟಪ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯAಥ ಅಪಾಯಕಾರಿ ವಸ್ತುಗಳನ್ನು ಬಳಸಿ ಪ್ರದರ್ಶನ ನೀಡುವಂತಿಲ್ಲ,

ಎಲ್ ಕೆ.ಜಿ. ಮತ್ತು ಯುಕೆಜಿ ವಿದ್ಯಾರ್ಥಿಗಳ ವಿಭಾಗ, 1 ನೇ ತರಗತಿಯಿಂದ 4 ನೇ ತರಗತಿ, 5 ರಿಂದ 7 ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಶ ಸ್ಪರ್ಧೆಗಳು ನಡೆಯಲಿದ್ದು, ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ. 5 ರಿಂದ 7 ನೇ ತರಗತಿ ಹಾಗೂ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪರ್ಧೆ ಆಯೋಜಿತವಾಗಿದೆ.

ಸೆ. 30 ರಂದು ಮಂಗಳವಾರ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸ್ಪರ್ಧಿಗಳು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಹಾಜರಿರಬೇಕು. ಎಲ್ಲಾ ಸ್ಪರ್ಧೆಗಳು ಬೆಳಗ್ಗೆ 9.30 ಗಂಟೆಯಿAದ ಪ್ರಾರಂಭವಾಗುತ್ತದೆ. ಈ ಎಲ್ಲಾ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಕೊನೇ ದಿನಾಂಕ ಸೆ.20 ಆಸಕ್ತರು ಸಂಘಟಕರನ್ನು ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net