ಇಬ್ಬೀಡು ಗ್ರಾಮದಲ್ಲಿ ಮಕ್ಕಳ ಗ್ರಾಮಸಭೆ

1blrp2
Published on

ಬೇಲೂರು: ಇಬ್ಬೀಡು ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಮಕ್ಕಳ ಗ್ರಾಮಸಭೆ ಆಯೋಜಿಸಲಾಗಿತ್ತು.
ಇಬ್ಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಲ್ಲಿ ತೊಡಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮಕ್ಕಳು ತಲೆ ಬಗ್ಗಿಸಿ ಮೊಬೈಲ್ ನೋಡಲು ಪ್ರಾರಂಭಿಸಿದರೆ ಮುಂದೆ ತಲೆ ಎತ್ತುವುದು ಕಷ್ಟ. ಆದ್ದರಿಂದ ಪಾಲಕರು ಮಕ್ಕಳನ್ನು ಸಾಧ್ಯವಾದಷ್ಟು ಮೊಬೈಲ್‌ನಿಂದ ದೂರವಿಟ್ಟು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗುತ್ತದೆ. ಇಂತಹ ಗ್ರಾಮಸಭೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಪಂಚಾಯಿತಿಗಳಲ್ಲಿ ಆಗು ಹೋಗುಗಳು ಮತ್ತು ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಪಿಡಿಒ ರವಿಕುಮಾರ್, ಸದಸ್ಯರಾದ ಜಯಣ್ಣ, ಮಂಜುನಾಥ, ಸಚಿನ್, ಈರಪ್ಪ, ಸುಮಿತ್ರಮ್ಮ, ಶಂಕ್ರಯ್ಯ, ಬಾಲಚಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net