ಮಕ್ಕಳಿಗೆ ಪಠ್ಯದೊಂದಿಗೆ ವ್ಯವಹಾರಿಕ ಜ್ಞಾನ ಬೆಳೆಸಿ

5blrp1
ಇಬ್ಬೀಡು ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಆವರಣ ಆಯೋಜಿಸಿದ್ದ ಮಕ್ಕಳ ಸಂತೆಯಲ್ಲಿ ಇಬ್ಬೀಡು ಗ್ರಾಪಂ ಅಧ್ಯಕ್ಷೆ ಮಂಜುಲಾ ಮಂಜುನಾಥ್ ಇತರರು ಭಾಗವಹಿಸಿದ್ದರು.
Published on

ಬೇಲೂರು: ಬೆಳೆಯುವ ಸಿರಿ ಮೊಳಕೆಯಲ್ಲೇ ಎಂಬಂತೆ ಮಕ್ಕಳಿಗೆ ಶಾಲೆಗಳಲ್ಲಿ ಪಠ್ಯದೊಂದಿಗೆ ವ್ಯವಹಾರಿಕ ಜ್ಞಾನ ಬೆಳೆಸಿದರೆ ಅವರ ಮುಂದಿನ ಜೀವನ ಉತ್ತುಂಗಕ್ಕೆ ಸಾಗಲು ಸಹಕಾರಿಯಾಗುತ್ತದೆ ಎಂದು ಇಬ್ಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಮಂಜುನಾಥ್ ಹೇಳಿದರು.

ತಾಲೂಕಿನ ಇಬ್ಬೀಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಆವರಣದಲ್ಲಿ ಇಬ್ಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 11 ಶಾಲೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೇ ವ್ಯವಹಾರಿಕ ಜ್ಞಾನವೂ ಮುಖ್ಯ. ಸಂತೆಯಲ್ಲಿ ಮಕ್ಕಳು ಭಾಗವಹಿಸುವುದರಿಂದ ವ್ಯವಹಾರಿಕ ಜ್ಞಾನ ಹೆಚ್ಚಲು ಸಹಕಾರಿಯಾಗಿದೆ. ಮಕ್ಕಳು ವಿದ್ಯಾಭ್ಯಾಸದೊಂದಿಗೆ ಏನನ್ನಾದರೂ ಸಾಧಿಸಲು ಅವಕಾಶಗಳು ಅಗತ್ಯ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ವ್ಯವಹಾರಿಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷ ಐ.ಜಿ.ಲೋಕೇಶ್, ಜಯಣ್ಣ, ಮಂಜುನಾಥ್, ಉಪಾಧ್ಯಕ್ಷೆ ಶಾರದಮ್ಮ, ಸದಸ್ಯರಾದ ಸಚಿನ್, ಆನಂದ್, ಈರಪ್ಪ, ಸುಮಿತ್ರಮ್ಮ, ಅಣ್ಣಪ್ಪ, ಮಂಜುನಾಥ್ ನೆಟ್ಟೆಕೆರೆ, ಶಿಕ್ಷಕರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net