ಮಾಕೋಡು ಗ್ರಾಪಂ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

ಮಾಕೋಡು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್‌ಮಾತನಾಡುತ್ತಿರುವುದು.
ಮಾಕೋಡು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್‌ಮಾತನಾಡುತ್ತಿರುವುದು.
Published on

ರಾವಂದೂರು: ಮಾಕೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದರು.

ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕೋಡು ಮತ್ತು ಮಂಟಿಕೊಪ್ಪಲು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವ ಮೂಲಕ ಸೌಕರ್ಯ ಕಲ್ಪಿಸಲಾಗಿದೆ. ಹೊಸ ಕಾಲೇಜುಗಳಿಗೆ ಸರ್ಕಾರದಿಂದ ಮಂಜೂರಾತಿ ದೊರೆತರೆ ಗ್ರಾಮಕ್ಕೆ ಪಿಯು ಕಾಲೇಜು ಮಂಜುರಾತಿ ಮಾಡಿಸಲಾಗುತ್ತದೆ ಎಂದು ತಿಳಿಸಿದರು.

ಅಂತೆಯೇ ಈ ಗ್ರಾಮಗಳಿಗೆ ರಸ್ತೆ, ಚರಂಡಿ ಹಾಗೂ ಸಾರಿಗೆ ವ್ಯವಸ್ಥೆ ಸಹ ಕಲ್ಪಿಸಲಾಗುವುದು. ಗ್ರಾಮೀಣ ಜನರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಅಧಿಕಾರಿಗಳಿಂದ ಪರಿಹಾರ ದೊರಕಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಶೈಲಜಾ, ಸದಸ್ಯರಾದ ಮುಬೀನ್ ತಾಜ್, ರಮೇಶ್, ರೂಪಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಮೈಮುಲ್ ನಿರ್ದೇಶಕ ಪ್ರಕಾಶ್, ಮುಖಂಡರಾದ ಕೃಷ್ಣೇಗೌಡ, ವಕೀಲ ಗೋರ್ಪಡೆ , ಸುರೇಶ್, ಸೋಮಣ್ಣ, ಸತೀಶ್, ನೀಲಕಂಠ, ನಿಂಗರಾಜ್, ಕೆಲ್ಲೂರು ಎ.ನಾಗರಾಜ್, ಡಿಎಸ್.ನಂದೀಶ್, ವಿಜಿ, ಪುಟ್ಟರಾಜ ಶಿವಣ್ಣ (ಭೀಮ), ತಾಲೂಕು ದಂಡಾಧಿಕಾರಿ ನಿಸರ್ಗಪ್ರಿಯ, ತಾಪಂ ಇಒ ಸುನಿಲ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net