ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಪುನರಾಯ್ಕೆ

mng-7nov-ajith kumar
Published on

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ 2022-2025ರ ಸಾಲಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಬಂಟರ ಮಾತೃ ಸಂಘಕ್ಕೆ ಸತತವಾಗಿ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ.
ಮುಂದಿನ ದಿನಗಳಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈ ಗೊಳ್ಳುವುದು ಹಾಗೂ ಸಮಾಜದ ಸವೋತೊಮುಖ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ಮಾಲಾಡಿ ಈ ಸಂದರ್ಭ ತಿಳಿಸಿದರು. ಮುಖ್ಯ ಚುನಾವಣಾಧಿಕಾರಿ ಬಿ.ಗುರುಪ್ರಸಾದ್ ಶೆಟ್ಟಿ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ಬಿಪಿರ್ ರೈ ಹಾಗೂ ಚುನಾವಣಾಧಿಕಾರಿ ದಿವಾಕರ ಸಾಮಾನಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net