

ಎಂ.ಕೆ.ಹುಬ್ಬಳ್ಳಿ:ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಗುರುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ಚನ್ನರಾಜ ಹಟ್ಟಿಹೊಳಿ ನೇತೃತ್ವದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೆತರ ಪುನಶ್ಚೇತನ ಪೆನಲ್ನಿಂದ ಅಧ್ಯ&ಉಪಾಧ್ಯ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಪ್ರಭಾವತಿ ಕೀರಪುರ ಕಾರ್ಯನಿರ್ವಹಿಸಿದರು.
ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ನಷ್ಟದಲ್ಲಿರುವ ಕಾರ್ಖಾನೆಯನ್ನು ಪುನಶ್ಚೇತನ ಮಾಡುವುದೇ ನಮ್ಮ ಗುರಿ. ದೀಪಾವಳಿಗೆ ಕಾರ್ಖಾನೆಯ ಪ್ರಸಕ್ತ ಸಾಲಿನ ಹಂಗಾಮು ಆರಂಭಿಸಿ 4ಲ ಮೆಟ್ರಿಕ್ ಟನ್ ಕಬ್ಬು ನುರಿಸಲು ಶ್ರಮಿಸುತ್ತೇವೆ. ಕಬ್ಬಿಗೆ ಸಮಯಕ್ಕೆ ಸರಿಯಾಗಿ ಯೋಗ್ಯದರ ನೀಡುತ್ತೇವೆ. ನಮ್ಮ ಮೇಲೆ ಸವಾಲುಗಳ ಗುಡ್ಡವೇ ಇದ್ದು, ಎಲ್ಲ ನಿರ್ದೇಶಕರು ಅಭಿವೃದ್ಧಿಗೆ ಶ್ರಮಿಸುತ್ತೇವೆ. ಸಚಿವೆ ಲಕ್ಷಿ$್ಮ ಹೆಬ್ಬಾಳಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ಮಾರ್ಗದರ್ಶನದಲ್ಲಿ ಮುನ್ನಡೆಯು ತ್ತೇವೆಂದರು. ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೆತರ ಪುನಶ್ಚೇತನ ಪೆನಲ್ ಮೇಲೆ ರೆತರಿಟ್ಟ ನಂಬಿಕೆಗೆ ದ್ರೋಹ ಆಗದಂತೆ ಕಾರ್ಖಾನೆ ಅಭಿವದ್ಧಿಪಡಿಸುವ ಜವಾಬ್ದಾರಿ ಎಲ್ಲ ನಿರ್ದೇಶಕರ ಮೇಲಿದ್ದು, ನಿರೀೆ ಈಡೇರಿಸಲು ಶ್ರಮಿಸಬೇಕು ಎಂದರು. ಕಾರ್ಖಾನೆ ಉಪಾಧ್ಯ ಶಿವನಗೌಡ ಪಾಟೀಲ, ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಮಾತನಾಡಿದರು. ನಿರ್ದೇಶಕರಾದ ಕೀರಪ್ಪ ಸಕ್ರೆಣ್ಣವರ, ಶಂಕರೆಪ್ಪ ಹೊಳಿ, ಶ್ರೀಕಾಂತ ಇಟಗಿ, ಶಂಕರ ಕಿಲ್ಲೇದಾರ, ಶ್ರೀಶೆಲ ತುರಮರಿ, ರಾಮನಗೌಡ ಪಾಟೀಲ, ರು ಪಾಟೀಲ, ಶಿವಪುತ್ರಪ್ಪ ಮರಡಿ, ಸುರೇಶ ಹುಲಿಕಟ್ಟಿ, ಲಲಿತಾ ಪಾಟೀಲ, ಸುನೀತಾ ಲಂಗೋಟಿ, ಬಾಳಪ್ಪ ಪೂಜಾರ, ಭರಮಪ್ಪ ಶಿಗೆಹಳ್ಳಿ ಇತರರಿದ್ದರು.