ಮಲೇರಿಯಾ ಜಾಗೃತಿ ಜಾಥಾಕ್ಕೆ ಚಾಲನೆ

25 MDG 2
Published on

ನರಗುಂದ: ಪಟ್ಟಣದ ಬಾಬಾಸಾಹೇಬ ಭಾವೆ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ದಿನಾಚರಣೆಯ ಜನಜಾಗೃತಿ ಜಾಥಾಕ್ಕೆ ಪುರಸಭೆ ಅಧ್ಯಕ್ಷೆ ನೀಲವ್ವ ವಡ್ಡಿಗೇರಿ, ಉಪಾಧ್ಯಕ್ಷೆ ಕೆ.ಬಿ. ಮಳಗಿ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ಸಿ. ಕೊರವನವರ ಮಾತನಾಡಿ, ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ಪ್ರತಿ ವರ್ಷ ಏ. 25ರಂದು ವಿಶ್ವ ಮಲೇರಿಯಾ ದಿನ ಆಚರಿಸಲಾಗುತ್ತದೆ. ಸೊಳ್ಳೆಗಳ ನಿಯಂತ್ರಣ ಮಾಡಿದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದರು.

ತಾಲೂಕು ಆರೋಗ್ಯಾಧಿಕಾರಿ ಜಿ.ವಿ. ಕೊಣ್ಣೂರ ಮಾತನಾಡಿ, ಕೆರೆ, ಕಟ್ಟೆಗಳು ಮುಂತಾದ ನಿಂತ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತದೆ. ಮಲೇರಿಯಾ ರೋಗ ಪತ್ತೆ ಹಚ್ಚಲು ಯಾವುದೇ ಜ್ವರವಿದ್ದಲ್ಲಿ ಅಂತವರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು. ಕೆ.ಎಸ್. ಹಾದಿಮನಿ, ಯುಸೂಫ ಅಂತಾರಿ, ಸಿ.ಎಫ್. ಕುಂಬಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net