ಮಲೇರಿಯಾ ಜಾಗೃತಿ ಜಾಥಾ

15-05-Shiva-2
ವಿಶ್ವ ಮಲೇರಿಯಾ ದಿನಾಚರಣೆ ನಿಮಿತ್ತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಯಚೂರಿನಲ್ಲಿ ಬುಧವಾರ ಮಲೇರಿಯಾ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಆರೋಗ್ಯಾಕಾರಿ ಡಾ.ಪ್ರಜ್ವಲ್, ಆರೋಗ್ಯ ಶಿಕ್ಷಣಾಕಾರಿ ಸರೋಜಾ, ಸಿಬ್ಬಂದಿಗಳಾದ ಬಸವರಾಜ, ಸುಲೋಚನಾ ಇದ್ದರು.
Published on

ರಾಯಚೂರು: ವಿಶ್ವ ಮಲೇರಿಯಾ ದಿನಾಚರಣೆ ನಿಮಿತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಗಾಜಗಾರಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಮಲೇರಿಯಾ ಜಾಗೃತಿ ಜಾಥಾ ನಡೆಸಲಾಯಿತು.
ತಾಲೂಕು ಆರೋಗ್ಯಾಕಾರಿ ಡಾ.ಪ್ರಜ್ವಲ್ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವ ಮೂಲಕ ಮಲೇರಿಯಾವನ್ನು ಹಿಮ್ಮೆಟ್ಟಿಸಲು ಎಲ್ಲರೂ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಕಾರಿ ಸರೋಜಾ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಬಸವರಾಜ, ಸುಲೋಚನಾ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net