ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ನಾಲ್ವರ ಬಂಧನ

crime
Published on

ಮಳವಳ್ಳಿ: ಪಟ್ಟಣದಲ್ಲಿ ಬಾಲಕಿಯೊಬ್ಬಳನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದ ಒಬ್ಬ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸಿ ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪಟ್ಟಣದ ಪ್ರಜ್ವಲ್(21), ಕಿಶೋರ್(20), ಕಾರ್ತೀಕ್(19), ನಾಗೇಶ್ (17) ಬಂಧಿತರು. ಕಳೆದ ಒಂದೂವರೆ ತಿಂಗಳ ಹಿಂದೆ ಸುಮಾರು 15 ವರ್ಷದ ಬಾಲಕಿ ಸಿಗರೇಟ್ ಸೇದುತ್ತಿದ್ದುದ್ದನ್ನು ಮೊಬೈಲ್‌ನಲ್ಲಿ ಆರೋಪಿತರಲ್ಲೊಬ್ಬ ಚಿತ್ರಿಕರಿಸಿಕೊಂಡಿದ್ದ ಎನ್ನಲಾಗಿದೆ. ಈ ವಿಡೀಯೊವನ್ನು ಬಾಲಕಿಗೆ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ಕೆಲ ದಿನಗಳ ನಂತರ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆಸಿಕೊಂಡು ನೀನು ಸಹಕರಿಸದಿದ್ದರೆ ನಿಮ್ಮ ಕುಟುಂಬದವರಿಗೆ ತೋರಿಸುವುದರ ಜತೆಗೆ ಸಾಮಾಜಿಕ ಜಾಲತಾಣಕ್ಕೆ ಸಿಗರೇಟ್ ಸೇದುತ್ತಿರುವ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡಿದ್ದ ಬಾಲಕಿಯನ್ನು ನಾಲ್ವರು ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಯಾರಿಗೂ ಹೇಳದಂತೆ ಬೆದರಿಸಿದ್ದಾರೆ. ಈ ಘಟನೆಯಿಂದ ಖಿನ್ನತೆಗೊಳಗಾಗಿದ್ದ ಬಾಲಕಿಯನ್ನು ಒಂದು ತಿಂಗಳ ನಂತರ ಕುಟುಂಬದವರು ಸಂತೈಸಿ ವಿಚಾರಿಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ.

ಗುರುವಾರ ರಾತ್ರಿ ಪಾಲಕರು ಪಟ್ಟಣ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಕೂಡಲೇ ಪೊಸ್ಕೋ ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸ್ ಇನ್ಸ್‌ಪೆಪೆಕ್ಟರ್ ರವಿಕುಮಾರ್, ತಡ ರಾತ್ರಿಯವರೆಗೆ ತಮ್ಮ ತಂಡದೊಡನೆ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net