ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸಿ

24 mlv 1
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Published on

ಮಳವಳ್ಳಿ : ವಿವಿಧ ಕ್ಷೇತ್ರಗಳ ಮೂಲಕ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸಾಧಕರನ್ನು ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳಿಗೆ ಭೂಷಣ ಎಂದು ಬಿ.ಜಿ.ಪುರ ಹೊರಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಪಟ್ಟಣದ ವಿಶ್ವಗುರು ಕೋ-ಆಪರೇಟಿವ್ ಸೊಸೈಟಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವಗುರು ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಶರಣ ಪರಂಪರೆಯಲ್ಲಿ ಸೇವಾ ಮನೋಭಾವವೇ ಕಾಯಕ ಸತ್ವ. ಇದನ್ನು ದಾರ್ಶನಿಕರು ಪ್ರತಿಪಾದಿಸಿದ್ದಾರೆ. ಶರಣರ ಅನುಯಾಯಿಗಳು ಇಂದಿಗೂ ವಿವಿಧ ಕ್ಷೇತ್ರಗಳಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೇ ಸತ್ಕಾರ್ಯಗಳನ್ನು ಮಾಡುತ್ತಿದ್ದಾರೆ. ಇಂತಹ ಸಹೃದಯಿಗಳನ್ನು ಗುರುತಿಸಬೇಕು. ಈ ಕಾರ್ಯದಿಂದ ಸಮಾಜಕ್ಕೆ ಇನ್ನಷ್ಟು ಉತ್ತಮ ಸೇವೆ ಲಭ್ಯವಾಗುತ್ತದೆ ಎಂದರು. ಆರ್ಥಿಕ ಸ್ಥಿರತೆ ಉಳ್ಳವರು ಜನಸೇವೆಗೆ ಮುಂದಾಗಬೇಕು. ಆಗ ವಿವಿಧ ರಂಗದಲ್ಲಿ ಒಂದಷ್ಟು ಸುಧಾರಣೆಗೆ ತರಲು ಸಹಕಾರಿಯಾಗಲಿದೆ ಎಂದು ಸ್ವಾಮೀಜಿ ಸಲಹೆ ನೀಡಿದರು.
ಸನ್ಮಾನ: ಸಹಕಾರ ಸಂಘಗಳ ನಿವೃತ್ತ ಜಂಟಿ ನಿರ್ದೇಶಕ ಹಾಗೂ ಅರ್ಥಶಾಸ್ತ್ರ ಲೇಖಕ ಡಾ.ಎಚ್.ಆರ್.ಕೃಷ್ಣಯ್ಯಗೌಡ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ ಮತ್ತು ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಚ್. ಆರ್. ಕನ್ಯಕಾ ಅವರಿಗೆ ವಿಶ್ವಗುರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 40ಕ್ಕೂ ಹೆಚ್ಚು ಸಮಾಜ ಸೇವಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net