

ಹನುಮಸಾಗರ: ನರೇಗಾ ಯೋಜನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಹಗೀರ ಗುಡದೂರ ಗ್ರಾಪಂ ಪಿಡಿಒ ನಿಂಗಪ್ಪ ಮೂಲಿಮನಿ ಹೇಳಿದರು.
ಸಮೀಪದ ಪರಮನಹಟ್ಟಿ ಗ್ರಾಮದಲ್ಲಿ ಮಂಗಳವಾರ ಮನರೇಗಾ ಯೋಜನೆಯಡಿ ದುಡಿಯೋಣ ಬಾ ಹಾಗೂ ಸ್ತ್ರೀ ಚೇತನ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನರೇಗಾ ಯೋಜನೆಯಡಿ ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ಪ್ರತಿದಿನ 370 ರೂ. ಕೂಲಿ ನೀಡಲಾಗುವುದು. ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ, ಗರ್ಭಿಣಿಯರಿಗೆ ಕೆಲಸ ಪ್ರಮಾಣದಲ್ಲಿ ಶೇ.50 ರಿಯಾಯಿತಿ ಹಾಗೂ ಬೇಸಿಗೆಯಲ್ಲಿ ತಾಪಮಾನ ಹೆಚ್ಚಿರುವುದರಿಂದ ಕೆಲಸದಲ್ಲಿ ಶೇ.30 ರಿಯಾಯಿತಿ ನೀಡಲಾಗುವುದು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ನರೇಗಾ ಕಾರ್ಮಿಕರ ಮಕ್ಕಳಾದ ಕವಿತಾ ಗಣವರಿ, ಭೀಮವ್ವ ಕುಂಬಾರ ಅವರನ್ನು ಗ್ರಾಪಂನಿಂದ ಸನ್ಮಾನಿಸಲಾಯಿತು.