ಮಲೆನಾಡು ಹಿಪ್ಪೊ ಕ್ಯಾಂಪಸ್ ಇಂಟರ್‌ನ್ಯಾಷನಲ್ ಶಾಲಾ ವಾರ್ಷಿಕೋತ್ಸವ

04_HSN_08
Published on

ಹಾಸನ: ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಮತ್ತು ಹಿಪ್ಪೊಕ್ಯಾಂಪಸ್ ಸಹಭಾಗಿತ್ವದ ಮಲೆನಾಡು ಹಿಪ್ಪೊ ಕ್ಯಾಂಪಸ್ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಈಚೆಗೆ ಆವರಣದಲ್ಲಿ ನಡೆಯಿತು. ಪ್ರತಿ ವರ್ಷದ ವಿಶೇಷತೆಯಂತೆ ಈ ವರ್ಷವೂ ಸಹ ಒಲಂಪಿಕ್ ಫ್ರೆಂಝಿ ಥೀಮ್‌ನಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಮನ್ವೆಲ್ತ್ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಗೋಲ್ಡ್ ಮೆಡಲ್ ವಿಜೇತರಾದ ಬಿಂದೂ ರಾಣಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡೆಯ ಮಹತ್ವ ಮತ್ತು ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಮೂಡಿಸಬೇಕೆಂದು ಪೋಷಕರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಆರ್.ಟಿ. ದ್ಯಾವೇಗೌಡ ಅವರು ನಮ್ಮ ಶಾಲೆಯು ಎಲ್ಲಾ ಶಾಲೆಗಳಿಗಿಂತ ಉತ್ತಮವಾದ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದ್ದು ಪೋಷಕರು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತಮ ಶಿಕ್ಷಣಕ್ಕಾಗಿ ನಮ್ಮ ಸಂಸ್ಥೆಗೆ ಸೇರಿಸಬೇಕು ಹಾಗೂ ಶಾಲೆಯಲ್ಲಿ ಯಾವುದೇ ಸಮಸ್ಯೆ ಬಂದರೂ ಅದನ್ನು ನಾನು ಬಗೆಹರಿಸುತ್ತೇನೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಸಿ.ಆರ್. ಜಗದೀಶ್ ಮಾತನಾಡಿ, ಶಾಲೆಯ ಶಿಕ್ಷಣ ವ್ಯವಸ್ಥೆ ಉತ್ತಮವಾಗಿದ್ದು ಅದರ ಜೊತೆಗೆ ನಮ್ಮ ಸಹಕಾರ ಸದಾ ಇರುತ್ತದೆ. ಹಾಗೆ ಶಾಲೆಯ ಹೆಚ್ಚುವರಿ ಕಟ್ಟಡವನ್ನು ಹಂತವಾಗಿ ನಿರ್ಮಿಸಲು ನಾವು ಸಹಕರಿಸುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ವರ್ಷ 2023-24 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, 2024-25ನೇ ಸಾಲಿನಲ್ಲಿ ಹೆಚ್ಚು ಅಂಕವನ್ನು ಪಡೆದಂತಹ ವಿದ್ಯಾರ್ಥಿಗಳಿಗೂ ಸಹ ಪ್ರಶಸ್ತಿ ವಿತರಿಸಲಾಯಿತು. ವಿದ್ಯಾರ್ಥಿಗಳು ಅತ್ಯುತ್ತಮವಾದ ನೃತ್ಯವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಖಜಾಂಜಿಗಳಾದ ಎಚ್.ಡಿ. ಪಾರ್ಶ್ವನಾಥ್, ಹಿಪ್ಪೊಕ್ಯಾಂಪಸ್ ಅಧ್ಯಕ್ಷ ಮಹೇಂದ್ರ, ಉಪಾಧ್ಯಕ್ಷರಾದ ಲಲಿತಾ ರೆಡ್ಡಿ, ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎ.ಜೆ. ಕೃಷ್ಣಯ್ಯ, ಶಾಲೆಯ ಪ್ರಾಂಶುಪಾಲರಾದ ಎಚ್.ಎಂ. ಹೇಮಲತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net