ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ

ತೃಪ್ತಿ
ತೃಪ್ತಿ ಬೋಪಣ್ಣ
Published on

ವಿರಾಜಪೇಟೆ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೇಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕವಾಗಿದ್ದಾರೆ.

ತೃಪ್ತಿ ಬೋಪಣ್ಣ 22 ವರ್ಷಗಳ ಬೋಧನಾ ಅನುಭವ ಹೊಂದಿದ್ದು, 16 ವರ್ಷಗಳಿಂದ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಾಣಿಜ್ಯಶಾಸ್ತ್ರ ವಿಷಯದ ಪ್ರಾಧ್ಯಾಪಕಿಯೂ ಆಗಿರುವ ಇವರು ಈ ಹಿಂದೆ ಕಾಲೇಜಿನ ಐಕ್ಯೂಎಸಿ ಸಂಚಾಲಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇವರ ಸೇವೆ ಗುರುತಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ತೃಪ್ತಿ ಬೋಪಣ್ಣ ಅವರನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೇ. ಫಾ.ಮದಲೈ ಮುತ್ತು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net