ಅರಿವಿನ ಕೊರತೆಯಿಂದ ಅನಿಷ್ಟ ಪದ್ಧತಿ ಜೀವಂತ

JAATHA
Published on

ಮುಂಡರಗಿ: ಬಾಲ್ಯ ವಿವಾಹ ಅನಿಷ್ಟ ಪದ್ಧತಿಯಾಗಿದೆ. ಅದನ್ನು ಹೊಡೆದೊಡಿಸಲು ಸರ್ಕಾರ ಸಾಕಷ್ಟು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ, ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ತಿಳಿವಳಿಕೆ ಕೊರತೆಯಿಂದ ಬಾಲ್ಯ ವಿವಾಹಗಳು ನಡೆಯುತ್ತಿವೆ. ಸಾರ್ವಜನಿಕರು ಕಾನೂನು ಅರಿತು ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಹಕಾರ ನೀಡಬೇಕು ಎಂದು ತಾಲೂಕು ವಕೀಲರ ಸಂಘದ ತಾಲೂಕು ಅಧ್ಯಕ್ಷ ಯು.ಸಿ. ಹಂಪಿಮಠ ಹೇಳಿದರು.

ಪಟ್ಟಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಕೀಲ ಎಂ.ಎನ್. ಬೆಳಗಟ್ಟಿ ಮಾತನಾಡಿ, ಬಾಲ್ಯ ವಿವಾಹ ನಿಷೇದ ಕಾಯ್ದೆಯನ್ನು 2006ರಲ್ಲಿ ಸರ್ಕಾರ ಜಾರಿಗೊಳಿಸಿದೆ. ಅಪ್ರಾಪ್ತೆಯನ್ನು ಯಾವುದೇ ವಯಸ್ಕ ಪುರುಷ ವಿವಾಹವಾದರೆ ಆತನಿಗೆ ಒಂದು ವರ್ಷದವರೆಗೆ ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ, ವಿವಾಹಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಬಾಲಕಿ ಮತ್ತು ಪುರುಷನ ಕುಟುಂಬದವರಿಗೂ ಶಿಕ್ಷೆ ನೀಡಲಾಗುತ್ತದೆ ಎಂದರು.

ಶಾಸಕರ ಮಾದರಿ ಕೇಂದ್ರ ಶಾಲೆಯಿಂದ ಹೊರಟ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮುಖ್ಯಶಿಕ್ಷಕ ಪಿ.ಡಿ. ಹಿರೇಮಠ, ಸಿಆರ್‌ಪಿ ವಿ.ಎಚ್. ಹೊಳೆಯಮ್ಮನವರ, ಪದ್ಮಾವತಿ ನಾಗರಹಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net