

ಕೊಡಗು: ಜಿಲ್ಲೆಯ ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಸುಂಟಿಕೊಪ್ಪದ ಶಶಿಕುಮಾರ್ (32) ಮತ್ತು ದಿವ್ಯ (20) ಎಂದು ಗುರುತಿಸಲಾಗಿದೆ.
ಸೋಮವಾರಪೇಟೆ ತಾಲೂಕಿನ ಮಲ್ಲಳ್ಲಿ ಜಲಪಾತದಲ್ಲಿ ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದರು.
ಆಕಸ್ಮಿಕವಾಗಿ ಜಲಪಾತದ ಕೆಳಗೆ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ಹೋಗಿ ಶಶಿಕುಮಾರ್ ಸಹ ಮೃತಪಟ್ಟಿದ್ದಾರೆ. ಅನಿರೀಕ್ಷಿತ ಸಾವಿನಿಂದ ಎರಡು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)