ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾದ ಅರ್ಚಕ

HN 2-2
Published on

ಮನಗೂಳಿ: ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸೋಮೇಶ್ವರ ದೇವಸ್ಥಾನ ಅರ್ಚಕ ಮಲ್ಲಯ್ಯ ಸಂಗಯ್ಯ ಮಠಪತಿ ಅವರು ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ವೈದಿಕ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸಹಯೋಗದಲ್ಲಿ ಜ.16 ರಿಂದ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ‘ರಾಷ್ಟ್ರೀಯ ವೈದಿಕ ಶಿರೋಮಣಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ಮಹಾಲಕ್ಷ್ಮೀ ಗುರುಕುಲ ವೈದಿಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಎನ್. ರಾಜಕುಮಾರ ಶಾಸಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net