ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಮಲ್ಲಿಕಾ ಪಕ್ಕಳ ಭೇಟಿ

btw_Karinja-1
Published on

ಬಂಟ್ವಾಳ: ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣಗೋಡೆ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಕಾವಳ ಪಡೂರು ಪಂಚಾಯಿತಿ ಸದಸ್ಯ ವೀರೇಂದ್ರ ಅಮೀನ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯ ಕರುಣೇಂದ್ರ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರವೀಣ್, ವಿಜಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net