

ಮಂಡ್ಯ: ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರನ್ನ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ತೆರವಾದ ಜಾಗಕ್ಕೆ 2016ರ ಐಪಿಎಸ್ ಬ್ಯಾಚ್ ಅಧಿಕಾರಿಯೂ ಆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿಯಾಗಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ನಿಯೋಜಿಸಿದೆ.