

ಮೈಸೂರು: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ನಗರದ ಸಿಲ್ಕ್ ಫ್ಯಾಕ್ಟರಿ ವೃತ್ತದ ಬಳಿಯಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಪ್ರತಿಮೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮಖಂಡರು ಸಿಹಿ ಹಂಚಿ ಸಂಭ್ರಮಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ಸಂವಿಧಾನ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಎನ್. ಭಾಸ್ಕರ್, ಆದಿ ಕರ್ನಾಟಕ ಮಹಾಸಂಸ್ಥೆ ಮುಖಂಡರಾದ ಶಿವಸ್ವಾಮಿ, ವೆಂಕಟಸ್ವಾಮಿ, ತಿರುಮಲ ಸ್ವಾಮಿ, ಅಶೋಕಪುರಂ ಆದಿ ಕರ್ನಾಟಕ ಹಿತರಕ್ಷಣ ಸಮಿತಿ ಅಧ್ಯಕ್ಷ ಕೆ. ಮುರಳಿ, ಕಾರ್ಯದರ್ಶಿ ಎಂ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡರಾದ ಎಸ್. ನವೀನ್ ಕುಮಾರ್, ಮಹಾದೇವ ಹಾಗೂ ಇತರು ಪಾಲ್ಗೊಂಡಿದ್ದರು.