ಜಾತಿ- ಧರ್ಮದ ಹೇಳಿಕೆಯಿಂದ ವೋಟ್ ಬರ್ತದೆಅಂದರೆ ಸರ್ಕಾರ ಏನೂ ಕೆಲಸ ಮಾಡಿಲ್ಲ ಎಂದು  ಅರ್ಥ

IMG-20230424-WA0177
Published on

ಮಂಗಳೂರು: ಲಿಂಗಾಯತ ಸಮುದಾಯಕ್ಕೆ ಸಂಬಂಧಿಸಿದ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಬಿಜೆಪಿಗೆ ಮತಗಳು ಬರುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಇತರ ನಾಯಕರು ಹೇಳುತ್ತಾರೆ ಅಂದರೆ ಅವರು ಸರ್ಕಾರ ನಡೆಸುತ್ತಿದ್ದ ಅವಧಿಯಲ್ಲಿ ಏನೂ ಕೆಲಸ ಮಾಡಿಲ್ಲ ಎಂದು ಅರ್ಥ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಬಾರಿಗೆ ಸೋಮವಾರ ಸಾಯಂಕಾಲ ಆಗಮಿಸಿದ ಅವರನ್ನು ನಗರದ ಮೇರಿಹಿಲ್ ಹೆಲಿಪ್ಯಾಡ್‌ನಲ್ಲಿ ಪಕ್ಷದ ಮುಖಂಡರು ಸ್ವಾಗತಿಸಿದರು.
ಈ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಪಕ್ಷಗಳು ಅವರವರ ಐಡಿಯಾಲಜಿಗಳ ಮೇಲೆ ಕೆಲಸ ಮಾಡುತ್ತವೆ. ಸಂವಿಧಾನದ ಇತಿಮಿತಿಯಲ್ಲಿ ನಾವು ಮಾತನಾಡಿದರೆ ಒಳ್ಳೆಯದು. ಜಾತಿ ಮತ್ತು ಧರ್ಮವನ್ನು ಚುನಾವಣೆಯಲ್ಲಿ ತಂದರೆ ಒಳ್ಳೆಯದಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net