ಕಾಂಗ್ರೆಸ್ ಸೇರಿದ ಮಾಲಿಕಯ್ಯ ಗುತ್ತೇದಾರ

IMG-20240419-WA0028
Published on

ಕಲಬುರಗಿ: ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ ಕಾಂಗ್ರೆಸ್ ತೊರೆದು ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾದರು.

2018ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರ್ಪಡೆಯಾಗಿದ್ದ ಮಾಲಿಕಯ್ಯ 2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೋಲಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಅವರ ಸಹೋದರ ನಿತಿನ್ ಗುತ್ತೇದಾರ ಬಿಜೆಪಿ ಸೇರ್ಪಡೆಯಾದ್ದರಿಂದ ಅಸಮಾಧಾನ ಗೊಂಡಿದ್ದ ಮಾಲಿಕಯ್ಯ ಇದೀಗ ಪುನಃ ಕೈ ಹಿಡಿದು ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net