

ಉಡುಪಿ: ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಮಂಗಳವಾರ ಅಣಕು ಕಾರ್ಯಾಚರಣೆ ನಡೆಸಲಾಯಿತು.
ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯಿತು. ನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.
ಕರಾವಳಿ ಕಾವಲು ಪಡೆಯ ಬೋಟ್ನಲ್ಲಿ ಸಿಬ್ಬಂದಿ ಶಸ್ತ್ರ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯವೈಖರಿ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತಾರಾಮ್, ಪಿಎಸ್ಐ ಫೆಮಿನಾ ಮೊದಲಾದವರು ಹಾಜರಿದ್ದರು.
ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಈ ಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆ ನಡೆಸಲಾಗಿದೆ. 3 ಬೋಟ್ಗಳು ಒಟ್ಟಿಗೆ ಮೀನುಗಾರಿಕೆಗೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ. ಮಿಥುನ್, ಎಸ್ಪಿ, ಕರಾವಳಿ ಕಾವಲು g8ಪಡೆ.