

ಉಡುಪಿ : ಮಲ್ಪೆ ಬಂದರಿನಲ್ಲಿ ಬೆಳಗ್ಗಿನ ಜಾವ 4.30ಕ್ಕೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಮೀನು ಆಯುವ ಕೆಲಸ ಮಾಡುತ್ತಿದ್ದ 16 ಮಂದಿ ಅಪ್ರಾಪ್ತ ಮಕ್ಕಳನ್ನು ರಕ್ಷಿಸಿದ್ದಾರೆ.
ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ನಿಟ್ಟೂರು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಲಾಯಿತು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ , ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ ,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯ ಅಧಿಕಾರಿ ವಿ .ಡಿ .ಮೊಗೇರ , ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರೋಷನ್ ಕುಮಾರ್, .ಎನ್ .ಆರ್ .ಎಲ್ .ಎಂ .ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ , ನಗರಸಭೆ ಅಧಿಕಾರಿ ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ , ಸಮಾಜ ಕಾರ್ಯಕರ್ತ ಯೋಗೀಶ್ ಸುರಕ್ಷಾ , ಸಮಾಲೋಚಕಿ ಅಂಬಿಕಾ, ಔಟ್ ರೀಚ್ ವರ್ಕರ್ ಸಂದೇಶ ,ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ನಮ್ರತಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ನವ್ಯಶ್ರೀ ,ಜಯಾ ,ಮಲ್ಪೆ ಠಾಣೆ ಸಿಬ್ಬಂದಿಗಳಾದ ಶಶಿಧರ್, ಮಲ್ಲನ ಗೌಡ ,ಪ್ರವೀಣ್, ನಾಗರಿಕ ಸೇವಾ ಟ್ರಸ್ಟ್ ನ ನಿತ್ಯಾನಂದ ಒಳಕಾಡು , ಮಕ್ಕಳ ಸಹಾಯವಾಣಿ ಸಮಾಲೋಚಕಿ ಜ್ಯೋತಿ ,ಹೊಸಬೆಳಕು ಸಂಸ್ಥೆಯ ತನುಲಾ ,ವಿನಯ ಆಚಾರ್ಯ ಭಾಗವಹಿಸಿದ್ದರು.