ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಬಂಧನ

20 hly --1
Published on

ಹಳಿಯಾಳ: ಅಕ್ರಮವಾಗಿ ಹಾಗೂ ಅಮಾನುಷವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು ಆರೋಪಿಯನ್ನು ಹಿಡಿದು ಹಳಿಯಾಳ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಬೆಳಗಾವಿ ನೋಂದಣಿಯ ವಾಹನದಲ್ಲಿ ಎರಡು ಹೋರಿ ಮತ್ತು ಮೂರು ಎಮ್ಮೆಗಳನ್ನು ಅತ್ಯಂತ ಅಮಾನುಷ ರೀತಿಯಲ್ಲಿ ಕಟ್ಟಿ ಹಾಕಿ ಕಸಾಯಿಖಾನೆಗೆ ಸಾಗಾಟ ಮಾಲಾಗುತ್ತಿತ್ತು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಮಧಿಸಿದಂತೆ ಬೆಳಗಾವಿಯ ಗಂದಿಗವಾಡದ ತನ್ವೀರ್ ಬುಡೆಸಾಬ ಸಾಹೇಬಖಾನ್(43) ಎಂಬಾತನನ್ನು ಬಂಧಿಸಲಾಗಿದೆ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net